ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು➤ಪವಾಡಸದೃಶ ರೀತಿಯಲ್ಲಿ ಪಾರಾದ ಮೂವರು ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಹಳೆಯಂಗಡಿ, ಜೂನ್.4. ಮಂಗಳವಾರ ಮುಂಜಾನೆ ಮಂಗಳೂರು- ಉಡುಪಿ ಮಾರ್ಗವಾಗಿ ಬರುತ್ತಿದ್ದ ವೇಳೆ ಹಳೆಯಂಗಡಿಯಲ್ಲಿ  ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹತ್ತು ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳ್ಳಾರಿಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಎಂದು ತಿಳಿದು ಬಂದಿದೆ. ಚಾಲಕನ ನಿದ್ರೆ ಮಂಪರಿನಿಂದ ಈ ಘಟನೆ ನಡೆದಿರಬಹುದು ಎಂದು ಸಂಚಾರಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

Also Read  ಗಾಂಧಿ ಪುರಸ್ಕಾರವಾದ ಕೊಯಿಲ ಗ್ರಾಮದಲ್ಲಿ ಅಭಿವೃದ್ಧಿಯಾಗದೇ ಇರುವುದು ಖೇದಕರ - ಮುನೀರ್ ಆತೂರು

 

error: Content is protected !!
Scroll to Top