(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.ಮಂಗಳೂರು ತಾಲೂಕಿನ ಕೂಳೂರು ಎಂಬಲ್ಲಿರುವ ಪಾಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಮಾನು ಸೇತುವೆಯು ತುಂಬ ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿರುವುದರಿಂದ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಮುಗಿಯುವವರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗುತ್ತದೆ.
ಸದ್ರಿ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸುವುದು ಅನಿವಾರ್ಯವೆಂದು ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 115 ಹಾಗೂ 1989 ರ ನಿಯಮ 221 ಎ(5) ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿಪರ್ಯಾಯ ಮಾರ್ಗವಾಗಿ ಉಡುಪಿಯಿಂದ ಬೆಂಗಳೂರು ಕಡೆಗೆ ಹೋಗುವ ಮತ್ತು ಬೆಂಗಳೂರಿನಿಂದ ಎಂಆರ್‍ಪಿಎಲ್ ಉಡುಪಿ ಕಡೆಗೆ ಬರುವ ಬುಲೆಟ್ ಟ್ಯಾಂಕರ್‍ಗಳನ್ನು ಪಡುಬಿದ್ರೆ, ಕಾರ್ಕಳ- ಗುರುವಾಯನ ಕೆರೆ- ಧರ್ಮಸ್ಥಳ ಕೊಕ್ಕಡ-ಪೆರಿಯಶಾಂತಿ ಮೂಲಕ ಸಂಚರಿಸುವುದು. ಕೇರಳ ರಾಜ್ಯದಿಂದ ಉಡುಪಿ ಕಡೆಗೆ ಬರುವ ಬುಲೆಟ್ ಟ್ಯಾಂಕರ್‍ಗಳು ಕೆ.ಪಿ.ಟಿ ಯಿಂದ ಕಾವೂರು ಬಜಪೆ ಕಾನ ಸುರತ್ಕಲ್ ಮೂಲಕ ಸಂಚರಿಸುವುದು.
ಘನ ವಾಹನಗಳಾದ ಲಾರಿ ಬಸ್ಸು ಟ್ಯಾಂಕರ್‍ಗಳಿಗೆ ಕೂಳೂರು ಹೊಸ ಸೇತುವೆಯ ಮೂಲಕ ದ್ವಿಮುಖ ಸಂಚಾರ ವ್ಯವಸ್ಥೆ ಕಲ್ಪಿಸುವುದು. ಲಘು ವಾಹನಗಳಾದ ಕಾರು ಜೀಪು, ಟೆಂಪೊ, ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನಗಳನ್ನು ಹಳೆಯ ಕಮಾನು ಸೇತುವೆಯ ಮೂಲಕ ದ್ವಿಮುಖವಾಗಿ ಸಂಚರಿಸುವ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿರುತ್ತಾರೆ.ಸದ್ರಿ ರಸ್ತೆಯಲ್ಲಿ ವಾಹನ ಸಂಚಾರ ವ್ಯವಸ್ಥೆಯ ಬಗ್ಗೆ ಅವಶ್ಯವಿರುವ ಸೂಚನಾ ಫಲಕ ಅಳವಡಿಸಿ ಸಾರ್ವಜನಿಕರಿಗೆ ತಿಳುವಳಿಕೆ ನೀಡಲು ಯೋಜನಾ ನಿರ್ದೇಶಕರು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳೂರು ಇವರಿಗೆ ಸೂಚಿಸಲಾಗಿದೆ.
ಹಾಗೂ ಸಂಚಾರ ನಿಯಂತ್ರಣ ಸಿಬ್ಬಂದಿಗಳನ್ನು ನೇಮಕಗೊಳಿಸಲು ಪೊಲೀಸ್ ಆಯುಕ್ತರು, ಮಂಗಳೂರು ನಗರ ಇವರು ಮತ್ತು ಪೊಲೀಸ್ ಅಧೀಕ್ಷಕರು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರು ತಮ್ಮ ವ್ಯಾಪ್ತಿಯಲ್ಲಿ ಮೋಟಾರ್ ವಾಹನ ಕಾಯಿದೆ 1988 ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಾವಳಿ 1989 ರ ನಿಯಮ 221 ಎ (2) ರ ಪ್ರಕಾರ ಅಧಿಕಾರವುಳ್ಳವರಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.