(ನ್ಯೂಸ್ ಕಡಬ) newskadaba.comಮಂಗಳೂರು, ಜೂನ್.6. ಈದುಲ್ ಫಿತ್ರ ಇದು ಮುಸಲ್ಮಾನ್ ಭಾಂದವರ ಶ್ರೇಷ್ಠ ಹಬ್ಬ ಎಲ್ಲೆಲ್ಲು ಸಂಭ್ರಮ ಸಡಗರ.ಶವ್ವಾಲ್ ತಿಂಗಳ ಆರಂಭದ ದಿನವಾದ ಬುಧವಾರದಂದು ಮುಸ್ಲಿಮರು ಈದುಲ್ ಫಿತ್ರ ಹಬ್ಬವನ್ನು ಮಂಗಳೂರು ಸಹಿತ ದಕ್ಷಿಣ ಕನ್ನಡ, ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಸಂಭ್ರಮ, ಸಡಗರದಿಂದ ಆಚರಿಸಿದರು.
ಕರಾವಳಿ ಜಿಲ್ಲೆಗಳ ಎಲ್ಲ ಪ್ರಮುಖ ಮಸೀದಿಗಳಲ್ಲಿ ಬೆಳಗ್ಗೆ ಸಾಮೂಹಿಕ ನಮಾಝ್, ಧರ್ಮ ಗುರುಗಳು ಈದ್ ಸಂದೇಶ ಮತ್ತು ಪ್ರವಚನ ನೀಡಿದರು. ಪ್ರಮುಖ ಮಸೀದಿಗಳಲ್ಲಿ ಸೌಹಾರ್ದ ಸಭೆ ನಡೆಯಿತು.ಈದುಲ್ ಫಿತ್ರ ಹಬ್ಬವು ಕುಟುಂಬ, ಸಮಾಜ, ದೇಶ ಮತ್ತು ಜಾಗತಿಕ ಮಟ್ಟದಲ್ಲಿ ಮನುಷ್ಯ- ಮನುಷ್ಯರ ನಡುವಣ ಸಂಬಂಧ ವೃದ್ಧಿಗೆ ಪ್ರೇರಣೆ ನೀಡಲಿ.
ಹಳಸಿದ ಸಂಬಂಧಗಳು ಮರು ಜೋಡಣೆಯಾಗಲಿ.“ಕೆಡುಕನ್ನು ಒಳಿತಿನ ಮೂಲಕ ಎದುರಿಸಿ’ ಎಂಬ ಕುರ್‌ಆನ್ ಸಂದೇಶ ಹಾಗೂ ಪರಸ್ಪರ ಪ್ರೀತಿ, ವಿಶ್ವಾಸದ ಮೂಲಕ ಜಗತ್ತನ್ನು ಗೆದ್ದಿರುವ ಪ್ರವಾದಿ ಬೋಧನೆ ನಮಗೆಲ್ಲಾ ಮಾರ್ಗದರ್ಶಿಯಾಗಲಿ ಎಂದು ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಸಂದೇಶದಲ್ಲಿ ಹೇಳಿದರು.ಈ ಹಬ್ಬದ ಆಚರಣೆಯು ಮಾನವ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಎಂಬ ಸಂದೇಶವನ್ನು ನೀಡಿದರು.