ಸೊಳ್ಳೆ ಉತ್ಪಾದನಾ ಕೇಂದ್ರವಾದ ಕಡಬದ ಘನ ತ್ಯಾಜ್ಯ ವಿಲೇವಾರಿ ಘಟಕ ➤ ಕಣ್ಣು ಮುಚ್ಚಿ ಕುಳಿತಿರುವ ಕಡಬ ಗ್ರಾಮ ಪಂಚಾಯತ್ ಆಡಳಿತ ಮಂಡಳಿ

(ನ್ಯೂಸ್ ಕಡಬ) newskadaba.com ಕಡಬ, ಜೂ.06. ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಿ 2010 – 11 ನೇ ಸಾಲಿನಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಸ್ವಚ್ಛ ಗ್ರಾಮ ಪುರಸ್ಕಾರ ಪಡೆದಿದ್ದ ಕಡಬ ಗ್ರಾಮ ಪಂಚಾಯತ್‌ನ ಘನ ತ್ಯಾಜ್ಯ ವಿಲೇವಾರಿ ಘಟಕವು ಇದೀಗ ತ್ಯಾಜ್ಯ ನಿರ್ವಹಣೆ ಇಲ್ಲದೆ ಸೊಳ್ಳೆ ಉತ್ಪತ್ತಿ ಕೇಂದ್ರವಾಗಿ ಮಾರ್ಪಟ್ಟಿದೆ.

ಕೋಡಿಂಬಾಳ ಗ್ರಾಮದ ಕಕ್ಕೆತ್ತಿಮಾರು ಎಂಬಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ನಿರ್ವಹಣೆ ಇಲ್ಲದೆ ರಾಶಿ ಬಿದ್ದಿರುವ ಕಸದಿಂದಾಗಿ ಸೊಳ್ಳೆ ಉತ್ಪತ್ತಿಯಾಗುತ್ತಿದ್ದು, ಇದರಿಂದ ಆಸುಪಾಸಿನ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜ್ವರ ಬಾಧಿತರಿದ್ದಾರೆ‌. ತ್ಯಾಜ್ಯ ಘಟಕದಲ್ಲಿ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ನಡೆಯದೇ ಇರುವುದು ಸೊಳ್ಳೆಗಳು ಉತ್ಪತ್ತಿಯಾಗಿ ರೋಗ ಹರಡಲು ಕಾರಣವಾಗುತ್ತಿದೆ ಎನ್ನುವ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಈ ಕುರಿತು ಆರೋಗ್ಯ ಇಲಾಖಾಧಿಕಾರಿಗಳು ಹಾಗೂ ಪಂಚಾಯತ್ ಆಡಳಿತ ಮಂಡಳಿಯು ಗಮನಹರಿಸುವ ಅಗತ್ಯವಿದೆ.

Also Read  ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಈ ಬಗ್ಗೆ ಕಡಬ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆಯವರನ್ನು ‘ನ್ಯೂಸ್ ಕಡಬ’ ಸಂಪರ್ಕಿಸಿದಾಗ ಪ್ಲಾಸ್ಟಿಕ್ ಕಸಗಳನ್ನು ವಿಂಗಡಿಸುವಂತೆ ಹಲವು ಬಾರಿ ಅಂಗಡಿ ಮಾಲಕರಿಗೆ ನೋಟೀಸ್ ಕಳುಹಿಸಿದರೂ ಯಾರೂ ಈ ಬಗ್ಗೆ ಗಮನ ಹರಿಸುವುದಿಲ್ಲ. ಕಸಗಳನ್ನು ವಿಂಗಡಿಸುವುದಕ್ಕಾಗಿ ಘನ ತ್ಯಾಜ್ಯ ಘಟಕದಲ್ಲಿ ರಾಶಿ ಹಾಕಿದ್ದು, ಕೂಲಿ ಕಾರ್ಮಿಕರ ಕೊರತೆಯಿಂದಾಗಿ ವಿಂಗಡನಾ ಕಾರ್ಯ ವಿಳಂಬವಾಗುತ್ತಿದೆ ಎಂದರು.

error: Content is protected !!
Scroll to Top