ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.7.ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆಗಸ್ಟ್ 2019 ನೇ ಶೈಕ್ಷಣಿಕ ಸಾಲಿನ ಪ್ರವೇಶ ಅರ್ಜಿಗಳನ್ನು ಆನ್‍ಲೈನ್ ಮುಖಾಂತರ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದೆ.

ಕಾವಳಕಟ್ಟೆ ಕೈಗಾರಿಕಾ ತರಬೇತಿ ಸಂಸ್ಥೆಗೆ ಪ್ರವೇಶ ಬಯಸುವ ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ:25/05/2019 ರಿಂದ 15/06/2019 ರವರೆಗೆ ಸಂಸ್ಥೆಯಲ್ಲಿ ಲಭ್ಯವಿರುವ ಇಲೆಕ್ಟ್ರೀಷಿಯನ್ ಮತ್ತು ಫಿಟ್ಟರ್ ಕೋರ್ಸು/ವೃತ್ತಿಗಳಿಗೆ ಇಲಾಖೆಯ ವೆಬ್‍ಸೈಟ್ www.emptrg.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

Also Read  ಈ ಮಂತ್ರ ಹೇಳುವುದರಿಂದ ನಿಮಗೆ ಮಂಗಳ ದೋಷ ಒಂದೇ ದಿನದಲ್ಲಿ ನಿವಾರಣೆ ಆಗುತ್ತದೆ ಕಷ್ಟಗಳು ಪರಿಹಾರ ಆಗುತ್ತದೆ

error: Content is protected !!
Scroll to Top