(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.7.2019-20ನೇ ಸಾಲಿನ ಮೈಸೂರಿನ ಪಿಂಜರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ನೀಡುವ ಕಾರ್ಯಕ್ರಮದಡಿ ಗೋಶಾಲೆಗಳಲ್ಲಿನ ಜಾನುವಾರುಗಳ ದೈನಂದಿನ ನಿರ್ವಹಣೆಗೆ ಅವಶ್ಯವಿರುವ ಸಹಾಯಧನ ಕೋರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಗೋಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಗೋಶಾಲೆಯವರು ಅರ್ಜಿ ಹಾಗೂ ಇನ್ನಿತರೆ ಮಾಹಿತಿಯನ್ನು ಕಚೇರಿಯ ವೇಳೆಯಲ್ಲಿ ಪಡೆದುಕೊಳ್ಳಬೇಕು. ಹಾಗೂ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಜೂನ್ 25 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0824-2492337 ಸಂಪರ್ಕಿಸಬಹುದು ಎಂದು ಉಪ ನಿರ್ದೇಶಕರು (ಆಡಳಿತ) ಪಶುಪಾಲನಾ ಇಲಾಖೆ, ದಕ್ಷಿಣ ಕನ್ನಡ ಇವರ ಪ್ರಕಟಣೆ ತಿಳಿಸಿದೆ.
