ನೇರ್ಲ ಶಾಲೆ➤ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.7. ‘ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ’ ಇಚ್ಲಂಪಾಡಿ ನೇರ್ಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ತಾಲೂಕು ಪಂಚಾಯತ್ ಸದಸ್ಯೆ ಕೆ.ಟಿ.ವಲ್ಸಮ್ಮ ಗಿಡನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಶಿಕ್ಷಕಿ ಶಾಂತಿ ವಿ.ಭಟ್ ಮಾತನಾಡಿ, ಬದಲಾದ ಇಂದಿನ ಜಗತ್ತಿಗೆ ಗಿಡ ನೆಡುವ ಅಗತ್ಯದ ಜೊತೆ ಪರಿಸರವನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಇದೆ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕಾಗಿದೆ ಎಂದು ಕರೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಮನೆಯಿಂದ ತಂದ ಸಸಿಗಳನ್ನು ಶಾಲಾ ವಠಾರದಲ್ಲಿ ನೆಡಲಾಯಿತು. ಗ್ರಾ.ಪಂ.ಉಪಾಧ್ಯಕ್ಷೆ ವಾಣಿ ಎನ್., ಶಿಕ್ಷಕ ವೃಂಧ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಾಂತಿ ವಿ. ಭಟ್ ಸ್ವಾಗತಿಸಿ, ವಂದಿಸಿದರು.

Also Read  'ಟ್ವಿಟ್ಟರ್'ನಲ್ಲಿ 'ಫೇಕ್ ವೀಡಿಯೋ' ಹಂಚಿಕೆ ಆರೋಪ - ವ್ಯಕ್ತಿ ವಿರುದ್ಧ 'FIR ದಾಖಲು'

error: Content is protected !!
Scroll to Top