(ನ್ಯೂಸ್ ಕಡಬ) newskadaba.com ನವದೆಹಲಿ, ಆ.06. ದೇಶದ ಉಪರಾಷ್ಟ್ರಪತಿ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರನ್ನು 272 ಮತಗಳ ಅಂತರದಿಂದ ಸೋಲಿಸುವ ಮೂಲಕ 15ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ ಆಗಿದ್ದಾರೆ.
ಒಟ್ಟು 785 ಮತದಾರರ ಪೈಕಿ 771 ಅಭ್ಯರ್ಥಿಗಳು ಮತ ಚಲಾಯಿಸಿದ್ದು, ಬಿಜೆಪಿಯ ಇಬ್ಬರು ಸೇರಿ 14 ಮಂದಿ ಮತ ಹಾಕಿರಲಿಲ್ಲ. 516 ಸಂಸದರು ಎನ್‍ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು ಪರ ಮತ ಚಲಾಯಿಸಿದರೆ, 244 ಮಂದಿ ಸಂಸದರು ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಪರ ಮತ ಚಲಾಯಿಸಿದ್ದಾರೆ. ವೆಂಕಯ್ಯ ನಾಯ್ಡು ಅವರಿಗೆ ಹೆಚ್ಚುವರಿಯಾಗಿ 17 ಮತಗಳು ಬಿದ್ದಿರೆ, ಗೋಪಾಲಕೃಷ್ಣ ಗಾಂಧಿ ಅವರಿಗೆ 33 ಮತಗಳು ಕಡಿಮೆ ಬಿದ್ದು, ಚುನಾವಣೆಯಲ್ಲೂ ಅಡ್ಡಮತದಾನ ನಡೆದಿದೆ.