ನೀವು ಉದ್ಯೋಗವಿಲ್ಲದೆ ಪರದಾಡುತ್ತಿದ್ದೀರಾ..? ➤ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗ ಮೇಳ



(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.8. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಯುವ ಉದ್ಯೋಗಾಂಕ್ಷಿಗಳ ಸೇವಾ ಕೇಂದ್ರ ಹಾಗೂ ಪದುವಾ ಕಾಲೇಜು ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‍ಮೆಂಟ್ ಮಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳ ನಡೆಸಲು ಉದ್ಯೋಗ ಮೇಳ ಕಾರ್ಯಕ್ರಮವನ್ನು ಆಯೋಜಿಸಿದೆ.





ಇದೇ ಬರುವ ಜೂನ್12 ರಂದು ಪೂರ್ವಾಹ್ನ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಪದುವಾ ಕಾಲೇಜು ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‍ಮೆಂಟ್ ಕದ್ರಿ ಹಿಲ್ಸ್, ನಂತೂರು, ಮಂಗಳೂರು, ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸುಮಾರು 25ಕ್ಕಿಂತ ಹೆಚ್ಚು ಕಂಪೆನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿರುವರು.






ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ., ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ದೂರವಾಣಿ ಸಂಖ್ಯೆ: 0824-2457139 ನ್ನು ಸಂಪರ್ಕಿಸಬಹುದು. ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top