(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೊಜನಾ ಸಂಘ, ಪೊಲೀಸ್ ಇಲಾಖೆ, ವಕೀಲರ ಸಂಘ, ಮಕ್ಕಳ ಸಹಾಯವಾಣಿ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜನರಲ್ಲಿ ಕಾನೂನಿನ ನೆರವು ಹಾಗೂ ನೆರವಿನ ಬಗ್ಗೆ ತಿಳಿಯಪಡಿಸಲು ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇದೇ ಬರುವ ಜೂನ್ 12 ರಂದು ಪೂರ್ರ್ವಾಹ್ನ 10 ಗಂಟೆಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮ ಮಂಗಳೂರು ಪುರಭವನದಲ್ಲಿ ನಡೆಯಲಿದೆ.ಕಾರ್ಯಕ್ರಮ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಡ್ಲೂರು ಸತ್ಯನಾರಾಯಣಾಚಾರ್ಯ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಶಿಕಾಂತ್ ಸೆಂಥಿಲ್ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.