ಸಸಿಗಳನ್ನು ನೆಡುವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ನೆಹರೂ ಯುವ ಕೇಂದ್ರ ಮಂಗಳೂರು ಯುವ ಕಾರ್ಯ ಹಾಗೂ ಕ್ರೀಡಾ ಸಚಿವರು ಭಾರತ ಸರ್ಕಾರ ಹಾಗೂ ಪ್ರಜ್ವಲ್ ಯುವಕ ಮಂಡಲ (ರಿ) ಇವರ ಸಹಯೋಗದೊಂದಿಗೆ ನಗರದ ಕುದ್ಮುಲ್ ರಂಗರಾವ್ ಮೆಮೋರಿಯಲ್, ಬಾಬು ಗುಡ್ಡ ಪರಿಸರದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನೆಹರೂ ಯುವ ಕೇಂದ್ರ ಮಂಗಳೂರು ಅದರ ಜಿಲ್ಲಾ ಸಮನ್ವಯಾಧಿಕಾರಿ ರಘುವೀರ್ ಸೂಟರ್‍ಪೇಟೆ ರವರು ಉದ್ಘಾಟಿಸಿ ಸ್ವಚ್ಛ ಹಾಗೂ ಆರೋಗ್ಯಪೂರ್ಣ ಪರಿಸರ ನಿರ್ಮಾಣದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು ಈ ಮೂಲಕ ಪರಿಸರ ಸಂರಕ್ಷಣೆ ಸಾಧ್ಯ ಎಂದು ತಿಳಿಸಿದರು. ಖ್ಯಾತ ಪರಿಸರ ಪ್ರೇಮಿ ಜೀತ್ ಮಿಲನ್ ರೋಚ್‍ರವರು ಸಸಿಯನ್ನು ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರಜ್ವಲ್ ಯುವಕ ಮಂಡಲದ ಅಧ್ಯಕ್ಷರಾದ ಮಹೇಶ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಯುವಕ ಮಂಡಲ ಹಾಗೂ ಸದಸ್ಯರೊಂದಿಗೆ 1000 ಸಸಿಗಳ ಗುರಿಯನ್ನು ಹೊಂದಿದೆ ಎಂದು ತಿಳಿಸಿ ಸೆಸಿಯನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ನೆರವೇರಿಸಿದರು.

Also Read  ಕಡಬ :ಇನ್ನುಂದೆ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ➤ ತಪ್ಪಿದಲ್ಲಿ ದಂಡ -ಎಸ್.ಐ ರುಕ್ಮ ನಾಯ್ಕ್

error: Content is protected !!
Scroll to Top