(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.10. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಹಾಗೂ ನಟ ಗಿರೀಶ್ ಕಾರ್ನಾಡ್ ಸೋಮವಾರ ಬೆಳಿಗ್ಗೆ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ವಿಧಿವಶರಾದರು.
ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 81 ವರ್ಷ ವಯಸ್ಸಾಗಿತ್ತು.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. 1938 ಮೇ 19ರಂದು ಡಾ.ರಘುನಾಥ್ ಕಾರ್ನಾಡ್ ಹಾಗೂ ಕೃಷ್ಣಾ ಬಾಯಿ ದಂಪತಿಯ ಪುತ್ರನಾಗಿ ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದ್ದರು.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಗಿರೀಶ್ ಕಾರ್ನಾಡ್, ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಪ್ರೌಢ ಶಿಕ್ಷಣ ಪೂರೈಸಿ, ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದು ಆಕ್ಸ್‌ಫರ್ಡ್ ಡಿಬೇಟ್ ಕ್ಲಬ್ ಅಧ್ಯಕ್ಷರಾದ ಪ್ರಥಮ ಏಷಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಕನ್ನಡ, ಹಿಂದಿ, ಪಂಜಾಬಿ, ಮರಾಠಿ ಭಾಷೆಗಳಲ್ಲಿ ಪರಿಣತಿ ಹೊಂದಿದ್ದ ಕಾರ್ನಾಡ್ ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಾಹಿತ್ಯವನ್ನು ಪಸರಿಸಿದ್ದರು.