ಮಾತೃಶ್ರೀ ಯೋಜನೆ➤ಅಂಗನವಾಡಿ ಕೇಂದ್ರಗಳಲ್ಲಿ ಹೆಸರು ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11. ಜೂನ್ 12 ರಂದು ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಗೆ ಫಲಾನುಭವಿಗಳನ್ನು ನೋಂದಾಯಿಸಲು ಜಿಲ್ಲೆಯ ಎಲ್ಲಾ 2104 ಅಂಗನವಾಡಿ ಕೇಂದ್ರಗಳಲ್ಲಿ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಆದ್ಯತಾ ಕುಟುಂಬದಲ್ಲಿರುವ ಗರ್ಭಿಣಿಯರು ತಮಗೆ ಹತ್ತಿರವಿರುವ ಅಂಗನವಾಡಿ ಕೇಂದ್ರಕ್ಕೆ ಹೋಗಿ ಮಾತೃಶ್ರೀ ಯೋಜನೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು. ಅರ್ಹ ಗರ್ಭಿಣಿಯರಿಗೆ ಹೆರಿಗೆ ಪೂರ್ವ ರೂ. 3,000/- ಹಾಗೂ ಹೆರಿಗೆ ನಂತರ ರೂ. 3,000/- ಒಟ್ಟು ರೂ. 6,000/- ಗಳನ್ನು ತಮ್ಮ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Also Read  ಕಟ್ಟಡದ ಅವಶೇಷಗಳಡಿ ಪತ್ತೆಯಾಗಿದ್ದ ನವಜಾತ ಶಿಶುವನ್ನು ದತ್ತು ಪಡೆಯಲು ಮುಗಿಬಿದ್ದ ಜನ!

error: Content is protected !!
Scroll to Top