ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ➤ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2019-20 ನೇ ಸಾಲಿನ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ ಶಾಲೆ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳೂ 2018-19 ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ ಜೂನ್ 30ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ

ವಿದ್ಯಾರ್ಥಿಗಳು 2018-19 ನೇ ಸಾಲಿನ ವಿದ್ಯಾರ್ಥಿ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಭೋದನಾ ಶುಲ್ಕ ರಸೀದಿ ಅಥವಾ ಶಾಲಾ/ ಕಾಲೇಜಿನ ಗುರುತಿನ ಚೇಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಎಂದು ವಿಭಾಗೀಯ ನಿಯಂತ್ರಣಾಧಿಕಾರಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗ ಇವರ ಪ್ರಕಟಣೆ ತಿಳಿಸಿದೆ.

Also Read  ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

error: Content is protected !!
Scroll to Top