(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.11.ಬೆಂಗಳೂರಿನ ಕಚೇರಿಯಲ್ಲಿ ಕೆ.ಅಣ್ಣಾಮಲೈ ಅವರಿಂದ ರೋಹಿಣಿ ಕಟೋಚ್ ಸೆಪಟ್ ಅಧಿಕಾರ ಸ್ವೀಕರಿಸಿದರು. ಅಣ್ಣಾಮಲೈ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು.
ರೋಹಿಣಿ ಕಟೋಚ್ ಸೆಪಟ್ ಅವರು ಈ ಹಿಂದೆ ಕೂಡ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಇವರು ಕೋಲಾರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಅಣ್ಣಾಮಲೈ ಅವರು ರಾಜೀನಾಮೆ ನೀಡಿದ ಹಿನ್ನೆಲೆ ರೋಹಿಣಿ ಕಟೋಚ್ ಸೆಪಟ್ರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇವರು ಕೂಡ ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರು ಪಡೆದಿದ್ದಾರೆ. ಅಧಿಕಾರ ಹಸ್ತಾಂತರದ ಬಳಿಕ ಅಣ್ಣಾಮಲೈ ಅವರೊಂದಿಗೆ ಸಿಬ್ಬಂದಿ ಸೆಲ್ಫಿ ತೆಗೆದುಕೊಂಡು ಸಂತಸಪಟ್ಟರು. ಅಣ್ಣಾಮಲೈ ತಮ್ಮ ಅಧಿಕಾರವನ್ನು ಹಸ್ತಾಂತರಿಸಿದರು.
Also Read ರಸ್ತೆ ಬದಿಯಲ್ಲಿ ಮಗುವಿಗೆ ಹಾಲುಣಿಸುತ್ತಿದ್ದ ಬಲೂನ್ ಮಾರಾಟಗಾರ್ತಿ ಮೇಲೆ ಹರಿದ ಕಾರು ➤ ಮಹಿಳೆ ಮೃತ್ಯು...!