ಸುಳ್ಯ: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಯುವಕ ➤ ಮುಂದೇನಾಯಿತೆಂದು ನೀವೇ ನೋಡಿ.. ವೀಡಿಯೋ ವೈರಲ್…

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.12. ಕುಡಿದ ಮತ್ತಿನಲ್ಲಿ ಬೈಕ್ ಸವಾರನೊಬ್ಬ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಪರಿಣಾಮ ಬೈಕಿನಿಂದ ಬಿದ್ದು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಅರಂಬೂರಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಕಂಠಪೂರ್ತಿ ಕುಡಿದಿದ್ದ ಬಜಾಜ್ ಪಲ್ಸರ್ ಸವಾರ ಅಡ್ಡಾದಿಡ್ಡಿ ಬೈಕ್ ಚಲಾಯಿಸುವುದನ್ನು ಹಿಂಬದಿಯಿಂದ ತೆರಳುತ್ತಿದ್ದ ವಾಹನದವರು ವೀಡಿಯೋ ಚಿತ್ರೀಕರಣ ಮಾಡಿದ್ದು, ಅರಂಬೂರು ಸಮೀಪ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆಯಲ್ಲಿ ಗಾಯಗೊಂಡ ಸವಾರನನ್ನು ಸ್ಥಳೀಯರು 108 ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇದೀಗ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Also Read  ಮೆಸ್ಟ್ರೋ ಮತ್ತು ಝೈಲೋ ಕಾರು ನಡುವೆ ಢಿಕ್ಕಿ ➤ ಎಡಮಂಗಲ ನಿವಾಸಿಗೆ ಗಾಯ

 

error: Content is protected !!
Scroll to Top