ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಒಪನ್ ಹೌಸ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಜೂನ್ 14 ರಂದು ಬೆಳಿಗ್ಗೆ 10:30 ಗಂಟೆಗೆ ಔಠಿeಟಿ ಊouse ಕಾರ್ಯಕ್ರಮ ನಡೆಯಲಿದೆ. ಸ್ನಾತಕೋತ್ತರ ಪದವಿಗಳಿಗೆ ಅರ್ಜಿ ಹಾಕಲು ಬಯಸುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಸವಲತ್ತುಗಳನ್ನು ಪರಿಚಯಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ.


ಕಾರ್ಯಕ್ರಮವು, ನಿಟ್ಟೆ ವಿಶ್ವವಿದ್ಯಾನಿಲಯ ಸಹ ಕುಲಾಧಿಪತಿಗಳಾದ ಪ್ರೊ.ಎಂ.ಎಸ್.ಮೂಡಿತ್ತಾಯ ಇವರಿಂದ ಮಂಗಳೂರು ವಿಶ್ವವಿದ್ಯಾನಿಲಯದ ಲೆಕ್ಚರ್ ಕಾಂಪ್ಲೆಕ್ಸ್ ಹಾಲ್ ನಲ್ಲಿ ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆಯ ನಂತರ ವಿದ್ಯಾರ್ಥಿಗಳು ತಮ್ಮ ತಮ್ಮ ಆಯ್ಕೆಯ ವಿಭಾಗಗಳಿಗೆ ಭೇಟಿ ನೀಡಿ ಬೋಧಕ ವರ್ಗದವರೊಡನೆ ವಿಷಯಗಳ ಆಯ್ಕೆ ಸಂಬಂಧಿತ ಚರ್ಚೆ ಮಾಡಲು ಅವಕಾಶ ಮಾಡಿ ಕೊಡಲಾಗುತ್ತದೆ.

Also Read  ಲಂಚ ಸ್ವೀಕಾರ ➤ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್

ಮಂಗಳೂರು ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳಿಗೆ ಒದಗಿಸಿ ಕೊಡಲಿರುವ ಎಲ್ಲಾ ಸೌಲಭ್ಯಗಳನ್ನು ವೈಯಕ್ತಿಕವಾಗಿ ಕಾಣುವ ಮತ್ತು ಮನದಟ್ಟು ಮಾಡಿ ಕೊಳ್ಳುವ ಔಠಿeಟಿ ಊouse ಕಾರ್ಯಕ್ರಮಕ್ಕೆ ಸರ್ವರನ್ನೂ ಸ್ವಾಗತ ಸಮಿತಿಯು ಪ್ರೀತಿಯಿಂದ ಸ್ವಾಗತಿಸುತ್ತದೆ.ವಿವಿಧ ವಿಭಾಗಗಳಲ್ಲಿ ಅರ್ಜಿಗಳನ್ನು ಅದೇ ದಿನ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

 

error: Content is protected !!
Scroll to Top