(ನ್ಯೂಸ್ ಕಡಬ) newskadaba.com ಕಡಬ, ಜೂ.12. ಸ್ನೇಹಿತರೊಂದಿಗೆ ಸ್ನಾನಕ್ಕೆಂದು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಆಲಂಕಾರು ಸಮೀಪದ ಶಾಂತಿಮೊಗರು ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಮೃತ ಬಾಲಕನನ್ನು ಸವಣೂರು ಸಮೀಪದ ಪರಣೆ ನಿವಾಸಿ ಹಮೀದ್ ಎಂಬವರ ಪುತ್ರ ಸವಣೂರು ಸ.ಪ.ಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿ ಅಶ್ಫಾಕ್ ಎಂದು ಗುರುತಿಸಲಾಗಿದೆ. ಅಶ್ಫಾಕ್ ತನ್ನ ಸ್ನೇಹಿತರೊಂದಿಗೆ ಶಾಂತಿಮೊಗರು ಸೇತುವೆಯ ಬಳಿ ಸ್ನಾನಕ್ಕೆಂದು ಇಳಿದಿದ್ದು, ಈ ವೇಳೆ ನೀರಿನ ಸುಳಿಗೆ ಸಿಲುಕಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಆ ಬಳಿಕ ಸ್ಥಳೀಯ ಈಜುಗಾರರು ಬಾಲಕನಿಗಾಗಿ ಶೋಧ ನಡೆಸಿದಾಗ ಮೃತದೇಹ ಕಂಡುಬಂದಿದೆ.