(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು, ಮಡಿಕೇರಿ, ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು, ಮಂಗಳಗಂಗೋತ್ರಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿ ಇಲ್ಲಿ 2019-20 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಅರ್ಜಿ ಆಹ್ವಾನಿಸಲಾಗಿದೆ.
ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಹೊಂದಿರುವ ( ಕನಿಷ್ಠ 55% ಅಂಕಗಳೊಂದಿಗೆ) ಅರ್ಹ ಅಭ್ಯಥಿಗಳು ಅರ್ಜಿಯನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ನಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 15 ರಂದು ಸಂಜೆ 5.30 ಗಂಟೆಯ ಒಳಗಾಗಿ ಕುಲಸಚಿವ ಕಚೇರಿಗೆ ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿಯ ಒಂದು ಪ್ರತಿ ಮತ್ತು ದಾಖಲೆಗಳ ಜೆರಾಕ್ಸ್ ಪ್ರತಿ ಹಾಗೂ ಮೂಲದಾಖಲೆಗಳನ್ನು (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಸರ್ವಿಸ್ ಪ್ರಮಾಣ ಪತ್ರ, ಯು.ಜಿ.ಸಿ/ ಎಸ್.ಎಲ್.ಇಟಿ ಉತ್ತೀರ್ಣತೆ/ ಪಿ.ಹೆಚ್.ಡಿ. ಪದವಿ ಪ್ರಮಾಣ ಪತ್ರ) ಕಚೇರಿಗೆ ಸಲ್ಲಿಸಬೇಕು.
ಜೂನ್ 18 ರಂದು ಪೂರ್ವಾಹ್ನ 9 ಗಂಟೆಯಿಂದ ವಾಣಿಜ್ಯ ಶಾಸ್ತ್ರ ಮತ್ತು ಮ್ಯಾನೇಜ್‍ಮೆಂಟ್/ ಹೆಚ್.ಆರ್.ಡಿ/ಟೂರಿಸಮ್ & ಟ್ರಾವೆಲ್ ಮ್ಯಾನೇಜ್‍ಮೆಂಟ್, ಜೂನ್ 21 ರಂದು ಪೂರ್ವಾಹ್ನ 9 ಗಂಟೆಯಿಂದ ಕನ್ನಡ, ಹಿಂದಿ, ಇಂಗ್ಲೀಷ್, ಸಂಸ್ಕೃತ, 22 ರಂದು ಪೂರ್ವಾಹ್ನ 9 ಗಂಟೆಯಿಂದ ಅರ್ಥಶಾತ್ರ, ಸಮಾಜಶಾಸ್ತ್ರ, ಸಮಾಜಕಾರ್ಯ, ರಾಜ್ಯ ಶಾಸ್ತ್ರ, ಅಪರಾಹ್ನ 1 ಗಂಟೆಯಿಂದ ಇತಿಹಾಸ, ದೈಹಿಕ ಶಿಕ್ಷಣ, ಜರ್ನಲಿಸಮ್, ನೇರ ಸಂದರ್ಶನಕ್ಕೆ ಸಮಯ ನಿಗದಿಗೊಳಿಸಿದೆ.
ಜೂನ್ 24 ರಂದು ಪೂರ್ವಾಹ್ನ 9 ಗಂಟೆಯಿಂದ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಗಣಕ ವಿಜ್ಞಾನ, ಭೌತಶಾತ್ರ ಅಪರಾಹ್ನ 1 ಗಂಟೆಯಿಂದ ರಸಾಯನಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮಾಣುಜೀವ ವಿಜ್ಞಾನ, ಭೂಗೋಳಶಾಸ್ತ್ರ ವಿಷಯಗಳಿಗೆ ಕುಲಸಚಿವರ ಕಚೇರಿ, ಆಡಳಿತ ಸೌಧ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಯು.ಜಿ.ಸಿ. ಎನ್.ಇ.ಟಿ/ಎಸ್.ಎಲ್.ಇ.ಟಿ ಉತ್ತಿರ್ಣತೆ/ಪಿ.ಹೆಚ್.ಡಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಎಂದು ಪ್ರಕಟಣೆ ತಿಳಿಸಿದೆ.