ಕಡಬ: ಕೆಎಸ್ಸಾರ್ಟಿಸಿ ಬಸ್ – ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯದಲ್ಲಿ ಸಂಭವಿಸಿದೆ.

ಮೃತ ಸವಾರನನ್ನು ಬಲ್ಯ ಮದ್ರಾಡಿ ನಿವಾಸಿ ರಾಮಚಂದ್ರ ಗೌಡ ಎಂಬವರ ಪುತ್ರ ಮೋಕ್ಷಿತ್(21) ಎಂದು ಗುರುತಿಸಲಾಗಿದೆ. ಮೋಕ್ಷಿತ್ ತನ್ನ ಪಲ್ಸರ್ ಬೈಕಿನಲ್ಲಿ ಬಲ್ಯದಿಂದ ಕಡಬಕ್ಕೆ ತೆರಳುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿಯುಂಟಾಗಿ ಈ ದುರ್ಘಟನೆ ಸಂಭವಿಸಿದೆ‌. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

Also Read  ಕೆದಿಲ ಶೌರ್ಯ ವಿಪತ್ತು ತಂಡದಿಂದ ಹಿಂದೂ ರುದ್ರಭೂಮಿ ಸ್ವಚ್ಛತೆ

error: Content is protected !!
Scroll to Top