ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.13. ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರಿಯಡ್ಕ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಕೂವೆಚ್ಚಾರು ನಿವಾಸಿ ಮೋನಪ್ಪ ಗೌಡರ ಪುತ್ರಿ ತೇಜ(18) ಎಂದು ಗುರುತಿಸಲಾಗಿದೆ. ತೇಜ ಇಂದು ಬೆಳಿಗ್ಗೆ ಪೆರಿಯಡ್ಕದ ಹಾಲಿನ ಸೊಸೈಟಿಗೆ ಹಾಲು ತೆಗೆದುಕೊಂಡು ಹೋಗಿದ್ದು, ವಾಪಸ್ ಮನೆಗೆ ಬಾರದೆ ಇದ್ದ ಕಾರಣ ಮನೆಯವರು ಹುಡುಕಾಡಿದಾಗ ಕುಂಟಿನಿ ಎಂಬಲ್ಲಿ ಖಾಸಗಿ ವ್ಯಕ್ತಿಗೆ ಸೇರಿದ ಜಾಗದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಸ್ಥಳಕ್ಕೆ ಭೇಟಿ ನೀಡಿದ ಉಪ್ಪಿನಂಗಡಿ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top