ಇಂದು ವಿಶ್ವದಾದ್ಯಂತ ರಕ್ತದಾನಿಗಳ ದಿನಾಚರಣೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.ಪ್ರತಿ ವರ್ಷ ಜೂನ್ 14 ರಂದು ಅಂದರೆ ಇಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ.

ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಢೂದೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ” ಎನ್ನುವರು. ರಕ್ತಕ್ಕೆ ವರ್ಷವಿಡಿ ನಿರಂತರವಾಗಿ ಬೇಡೀಕೆ ಇರುತ್ತದೆ. ಯಾಕೆಂದರೆ ಅಪಘಾತಗಳು, ತುರ್ತು ಶಸ್ತ್ರಚಿಕಿತ್ಸೆಗಳ ಸಂದರ್ಭಗಳು ಒದಗುತ್ತಲೇ ಇರುತ್ತದೆ.

Also Read  ಸರ್ಕಾರಿ ಆಸ್ಪತ್ರೆಯ ಡ್ಯೂಟಿ ರೂಂನಲ್ಲೇ ವೈದ್ಯ ಆತ್ಮಹತ್ಯೆ    ➤ ಸ್ಥಳದಲ್ಲಿ ಡೆತ್ ನೋಟು ಪತ್ತೆ

ಜೊತೆಯಲ್ಲಿ ಅರ್ಬುಧ ರೋಗಿಗಳು, …………………… ಹಿಮೋಫಿûಲಿಯಾ ಮುಂತಾದ ರೋಗಿಗಳು ರಕ್ತದಾನಿಗಳನ್ನೇ ಅವಲಂಭಿಸಿರುತ್ತಾರೆ. ಒಮ್ಮೆ ದಾನಿಗಳಿಂದ ಶೇಖರಿಸಿದ ರಕ್ತ 35 ರಿಂದ 40 ದಿನಗಳ ವರೆಗೆ ಮಾತ್ರ ತನ್ನ ಶಕ್ತಿಯನ್ನು ಉಳಿಸಿಕೊಂಡಿರುತ್ತದೆ. ಆ ಬಳಿಕ ಅದು ಉಪಯೋಗಕ್ಕೆ ಬರುವುದಿಲ್ಲ. ಅದ್ದರಿಂದ ಜನತೆ ಆಗಾಗ ರಕ್ತದಾನ ಮಾಡಿದಲ್ಲಿ ಮಾತ್ರ ನಿರಂತರವಾಗಿ ಅವಶ್ಯಕತೆ ಇರುವವರಿಗೆ ರಕ್ತನೀಡಿ ಜೀವ ಉಳಿಸಲು ಸಾಧ್ಯವಾಗುತ್ತದೆ.

error: Content is protected !!
Scroll to Top