ಜಿಲ್ಲೆಯ ವಿವಿಧ ಸ್ಥಳಗಳಿಗೆ ಲೋಕಾಯುಕ್ತರ ಭೇಟಿ➤ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕಾರ

 

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಮಂಗಳೂರು ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.


ಜೂನ್ 17 ರಂದು ಪೂರ್ವಾಹ್ನ 11 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಚೇರಿ, ಅಪರಾಹ್ನ 3 ಗಂಟೆಯಿಂದ 4.30 ರವರೆಗೆ ಬಂಟ್ವಾಳ ತಾಲೂಕು ಕಚೇರಿ, ಜೂನ್ 18 ರಂದು ಪೂರ್ವಾಹ್ನ 11 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಹಶೀಲ್ದಾರರ ಕಚೇರಿ, ಅಪರಾಹ್ನ 3 ಗಂಟೆಯಿಂದ 4.30 ರವರೆಗೆ ಮಂಗಳೂರು ತಾಲೂಕು ಕಚೇರಿ,ಜೂನ್ 20 ರಂದು ಪೂರ್ವಾಹ್ನ 11 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ, ಜೂನ್ 21 ರಂದು ಪೂರ್ವಾಹ್ನ 11 ಗಂಟೆಯಿಂದ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿಗೆ ಭೇಟಿ ನೀಡಲಿದ್ದಾರೆ.ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ.

ಅನಾಮಧೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ I & IIರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : ಪೊಲೀಸ್ ಅಧೀಕ್ಷಕರ ಕಚೇರಿ -0824- 2429197, 9448390987 ,ಪೊಲೀಸ್ ಉಪಾಧೀಕ್ಷಕರ ಕಚೇರಿ -0824-2453420, 9886542369 ಪೊಲೀಸ್ ನಿರೀೀಕ್ಷಕರ ಕಚೇರಿ- 0824-2427237 ,8861688100 ,9448530051, 9449044377 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Also Read  ಸುಳ್ಯ: ಜೀಪ್ - ಸ್ಕೂಟರ್ ನಡುವೆ ಅಪಘಾತ ➤ 9ನೇ ತರಗತಿಯ ಓರ್ವ ವಿದ್ಯಾರ್ಥಿ ಮೃತ್ಯು, ಮತ್ತೋರ್ವ ಗಂಭೀರ

error: Content is protected !!
Scroll to Top