(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2018-19 ಮತ್ತು 2019-20 ನೇ ಸಾಲಿನಡಿ ವಲಸೆ ಕುರಿಗಾರರಿಗೆ ಸಂಚಾರಿ ಟೆಂಟ್ ಮತ್ತು ಇನ್ನಿತರ ಪರಿಕರಗಳ ಕಿಟ್‍ಗಳನ್ನು ಉಚಿತವಾಗಿ ವಿತರಿಸಲು ದಕ್ಷಿಣ ಕನ್ನಡ ಜಿಲ್ಲೆಯ ಅರ್ಹ ಹಾಗು ಆಸಕ್ತ ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯಾ ತಾಲೂಕಿನ ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಇವರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿ ಹಾಗೂ ಅವಶ್ಯಕ ದಾಖಲಾತಿಗಳನ್ನು ಜೂನ್ 29 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಹಾಸನ (ಮೊಬೈಲ್ ಸಂ:9740416579) ಅಥವಾ ಆಯಾ ತಾಲ್ಲೂಕಿನ ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಇವರನ್ನು ಸಂಪರ್ಕಿಸಬೇಕು.
ನಿಯಮಾನುಸಾರ ಆಯ್ಕೆ ಸಮಿತಿಯಿಂದ ಆಯ್ಕೆಗೊಂಡ ಪ.ಜಾತಿ/ಪ.ಪಂಗಡ/ಸಾಮಾನ್ಯ ವರ್ಗದ ವಲಸೆ ಕುರಿಗಾರರಿಗೆ ನಿಗಮದಿಂದ ನಿಗದಿಯಾಗಿರುವ ಗುರಿಯಂತೆ ಪರಿಕರಗಳ ಕಿಟ್‍ಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಸಹಾಯಕ ನಿರ್ದೇಶಕರು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಸನ ಇವರ ಪ್ರಕಟಣೆ ತಿಳಿಸಿದೆ.