(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಬಂಟ್ವಾಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುವ .ಡಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ವಾಮದಪದವು, ಮಣಿನಾಲ್ಕೂರು ಹಾಗೂ ಡಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಾದ ವಾಮದಪದವು, ಚೆನ್ನೈತ್ತೋಡಿ, ಬಿ.ಸಿ.ರೋಡು ಮತ್ತು ವಿಟ್ಲ ಇಲ್ಲಿಗೆ ಸಾಮಾನ್ಯ ಕೋರ್ಸುಗಳ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ಅರ್ಹ ವಿದ್ಯಾರ್ಥಿಗಳಿಂದ http://karepass.cgg.gov.in ರಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ , ಸಂಬಂಧಪಟ್ಟ ಶಾಲಾ- ಕಾಲೇಜುಗಳಿಂದ ನೀಡಲಾದ ವರ್ಗಾವಣೆ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ ಹಾಗೂ ಹಿಂದಿನ ತರಗತಿ/ಕೋರ್ಸುಗಳ ಅಂಕಪಟ್ಟಿ, ಬ್ಯಾಂಕ್ ಪಾಸ್‍ಬುಕ್‍ನ ಮೊದಲ ಪುಟ, ವಿದ್ಯಾರ್ಥಿಯು ವಿಕಲಚೇತನ /ಅಂಧ ವಿದ್ಯಾರ್ಥಿಗಳಾಗಿದ್ದಲ್ಲಿ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ. ವಿದ್ಯಾರ್ಥಿಯ ಫೋಟೋ, ಗ್ರಾಮ ಪಂಚಾಯತ್ /ಸ್ಥಳೀಯ ಸಂಸ್ಥೆಗಳಿಂದ ಪಡೆಯಲಾದ ವಾಸಸ್ಥಳದ ದೃಢೀಕರಣ ಪತ್ರ , ದಾಖಲೆಗಳನ್ನು ಆಪ್‍ಲೋಡ್ ಮಾಡಬೇಕಾಗಿದೆ.
ವಿದ್ಯಾರ್ಥಿ ನಿಲಯಕ್ಕೆ ಸೇರಲಿಚ್ಚಿಸುವ ಅಭ್ಯರ್ಥಿಗಳಾದ ವರ್ಗ-2ಎ, 2ಬಿ, 3ಎ, 3ಬಿಗೆ ಸೇರಿದ ಪೋಷಕರ ವಾರ್ಷಿಕ ಆದಾಯದ ಮಿತಿ ರೂ.1.00 ಲಕ್ಷ/-, ವರ್ಗ-1ರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರೂ .2.50 ಲಕ್ಷ ಇರಬೇಕು. ವಿದ್ಯಾರ್ಥಿಯು ಆನ್‍ಲೈನ್ ಅರ್ಜಿಯ ಪ್ರತಿ ಹಾಗೂ ಅಪ್‍ಲೋಡ್ ಮಾಡಲಾದ ದಾಖಲಾತಿಗಳ ಸ್ವಯಂ ದೃಡೀಕೃತ ಪ್ರತಿಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಂಟ್ವಾಳ ಅಥವಾ ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರುಗಳಿಗೆ ಜುಲೈ 12 ರೊಳಗೆ ಸಲ್ಲಿಸಬೇಕು ಎಂದು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಬಂಟ್ವಾಳ ತಾಲೂಕು ಇವರ ಪ್ರಕಟಣೆ ತಿಳಿಸಿದೆ.