ಜೂನ್ 21 ರಂದು ವಿಶ್ವಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಜಿಲ್ಲಾಡಳಿತ ವತಿಯಿಂದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮ ಜೂನ್ 21 ರಂದು ನಡೆಯಲಿದೆ.ಈ ಕುರಿತು ಪೂರ್ವಭಾವಿ ಸಭೆ ಶನಿವಾರ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ವಿಶ್ವಯೋಗ ದಿನಾಚರಣೆ ಕಾರ್ಯಕ್ರಮವನ್ನು ಯೋಜನಾಬದ್ಧವಾಗಿ ನಡೆಸಿ ಯಶಸ್ವಿಗೊಳಿಸಬೇಕು.

ಎಲ್ಲಾ ಸಂಘ ಸಂಸ್ಥೆಗಳನ್ನು ಇದರಲ್ಲಿ ತೊಡಗಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದರು. ತಾಲೂಕು ಮಟ್ಟದಲ್ಲಿಯೂ ಆಯುಷ್ ಕಾಲೇಜುಗಳ ಸಹಕಾರದೊಂದಿಗೆ ಯೋಗ ದಿನಾಚರಣೆ ಕಾರ್ಯಕ್ರಮ ನಡೆಸಲು ಅವರು ಸೂಚಿಸಿದರು. ಎಲ್ಲಾ ಇಲಾಖಾಧಿಕಾರಿಗಳು ಯೋಗ ದಿನಾಚರಣೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಜಿಲ್ಲಾ ಆಯುಷ್ ಅಧಿಕಾರಿ ಡಾ. ಮುಹಮ್ಮದ್ ಇಕ್ಬಾಲ್ ಮಾತನಾಡಿ, ವಿಶ್ವಯೋಗ ದಿನಾಚರಣೆ ಕಾರ್ಯಕ್ರಮ ಸಂಬಂಧ ಈಗಾಗಲೇ ವಿವಿಧ ಆಯುಷ್ ಕಾಲೇಜುಗಳೊಂದಿಗೆ ಸಭೆ ನಡೆಸಲಾಗಿದೆ.

Also Read  ಮಹಿಳೆ ಎಂಬುದು ಪರಿಗಣಿಸಿ ಜಾಮೀನು ನೀಡಿ - ಪವಿತ್ರಾ ಗೌಡ ಪರ ವಕೀಲರ ಮನವಿ

ಈಗಾಗಲೇ 8000 ಜನರಿಗೆ ಯೋಗ ತರಬೇತಿ ನೀಡಲಾಗಿದೆ. ಜೂನ್ 21 ರಂದು ನಗರದ ಪುರಭವನದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.ಸಭೆಯಲ್ಲಿ ಎಎಸ್‍ಪಿ ಅಮಟೆ ವಿಕ್ರಂ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಸಿಕಂದರ್ ಪಾಶಾ ಮತ್ತಿತರರು ಉಪಸ್ಥಿತರಿದ್ದರು.

error: Content is protected !!
Scroll to Top