ಕನ್ನಡ ಪುಸ್ತಕ ಪ್ರಾಧಿಕಾರ ➤ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2018 ನೇ ಸಾಲಿನ ಯುವಬರಹಗಾರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು 18 ರಿಂದ 35 ವರ್ಷದ ಒಳಗಿನವರಾಗಿರಬೇಕು. ಸ್ವ-ವಿವರದೊಂದಿಗೆ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ, ಜನ್ಮದಾಖಲಾತಿ ಪ್ರತಿಯನ್ನು ಸಲ್ಲಿಸಬೇಕು. ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು ಎಲ್ಲಿಯೂ ಪ್ರಕಟವಾಗಿಲ್ಲವೆಂದು ದೃಢೀಕರಣ ಪತ್ರ ನೀಡಬೇಕು.

ಅರ್ಜಿಯನ್ನು ಜುಲೈ 6 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ ರಸ್ತೆ ಬೆಂಗಳೂರು ಕಚೇರಿ ವೆಬ್ ಸೈಟ್: www.kannadapustakapradhikara.comದೂರವಾಣಿ ಸಂಖ್ಯೆ: 08022484516 /22107704 ಇಲ್ಲಿಗೆ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Also Read  ಜ.21ರಂದು ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ಕೈಪಿಡಿ ಬಿಡುಗಡೆ

error: Content is protected !!
Scroll to Top