ಶಾಲೆಗಳಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಸಲು ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲು ಯೋಜನೆ ಹಮ್ಮಿಕೊಂಡಿದೆ.

ಈ ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳು ತಮ್ಮ ತಮ್ಮ ಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆಯ ಒಂದು ಕಾರ್ಯಕ್ರಮ ಏರ್ಪಡಿಸಬಹುದಾಗಿದೆ. ಈ ಕಾರ್ಯಕ್ರಮ ನಡೆಸಲು ಪ್ರಾಧಿಕಾರವು ರೂ 5000/ ಗಳ ಗರಿಷ್ಠ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸುವುದು. ತಮ್ಮ ಶಾಲಾ ವಿವರ, ಕಾರ್ಯಕ್ರಮ ಹಮ್ಮಿಕೊಳ್ಳಬಹುದಾದ ದಿನಾಂಕ, ಆಹ್ವಾನಿಸುವ ತೀರ್ಪುಗಾರರ ಹೆಸರು ಇತ್ಯಾದಿ ವಿವರಗಳೊಂದಿಗೆ ಶಾಲಾ ಮುಖ್ಯಸ್ಥರು ಸ್ವಯಂ ಅರ್ಜಿ ಸಲ್ಲಿಸಬೇಕು.

Also Read  ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಅರ್ಜಿಯನ್ನು ಜುಲೈ 10 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ ಬೆಂಗಳೂರು ದೂರವಾಣಿ ಸಂಖ್ಯೆ: 08022484516 /22107704 ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕøತಿ ಇಲಾಕೆ ಕಚೇರಿ ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ ಸೈಟ್www.kannadapustakapradhikara.com,   ನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

error: Content is protected !!
Scroll to Top