ಎಂ.ಎ ತುಳು ಪದವಿ ಕೋರ್ಸಿಗಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.18.ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ನಿರಂತರ ಪ್ರಯತ್ನದ ಪಲವಾಗಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ ತುಳು ಸ್ನಾತಕೋತ್ತರ ಪದವಿ ಕೋರ್ಸು 2018-19ರ ಸಾಲಿನಲ್ಲಿ ಆರಂಭವಾಗಿದ್ದು ಲಭ್ಯವಿರುವ ಎಲ್ಲಾ ಸೀಟುಗಳು ಭರ್ತಿಯಾಗಿದ್ದವು.


ಪ್ರಸ್ತುತ 2019-20ರ ಸಾಲಿಗೆ ವಿಶ್ವವಿದ್ಯಾನಿಲಯವು ತುಳು ಎಂ.ಎ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಿರುತ್ತದೆ. ಸದ್ರಿ ಕೋರ್ಸು ಉದ್ಯೋಗದಲ್ಲಿರುವವರಿಗೆ ಅನುಕೂಲವಾಗುವಂತೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ, ಮಂಗಳೂರು ಇಲ್ಲಿ ಸಂಧ್ಯಾ ಕೋರ್ಸಾಗಿ ಕಾರ್ಯ ನಿರ್ವಹಿಸಲ್ಪಡುತ್ತದೆ. ಇದರ ಪ್ರಯೋಜನವನ್ನು ತುಳು ಆಸಕ್ತರು ಪಡೆದುಕೊಳ್ಳುವಂತೆ ತುಳು ಅಕಾಡೆಮಿ ಅಧ್ಯಕ್ಷರಾದ ಎ.ಸಿ.ಭಂಡಾರಿಯವರು ತಿಳಿಸಿದ್ದಾರೆ.

ಈ ಕೋರ್ಸಿನಲ್ಲಿ ತುಳು ಭಾಷೆಯ ಪ್ರಾಚೀನತೆ, ತುಳು ಸಂಸ್ಕ್ರತಿ, ತುಳುವರ ಆರಾಧನೆಗಳು ತುಳು ಲಿಪಿ ತುಳುವರ ಕೃಷಿ ಪದ್ಧತಿ, ವ್ಯಾಪಾರ ಸೇರಿದಂತೆ ತುಳುವರ ಉದ್ಯಮಶೀಲತೆಯ ವಿಷಯಗಳು ಒಳಗೊಂಡಿದ್ದು, ತುಳುವರು, ತುಳುವ ಸಮಾಜವನ್ನು ಅಧ್ಯಯನ ಮಾಡಲು ಈ ಕೋರ್ಸಿನಲ್ಲಿ ಅವಕಾಶವಿರುತ್ತದೆ.ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಪದವೀಧರರು ತುಳು ಎಂ.ಎಗೆ ಪ್ರವೇಶ ಪಡೆಯಲು ಆರ್ಹರಾಗಿದ್ದು, ವಿದ್ಯಾರ್ಥಿಗಳು ಸಂಜೆ ವೇಳೆಯಲ್ಲಿ ಅಭ್ಯಾಸ ಮಾಡಿಕೊಂಡು ಎಂ.ಎ ಸ್ನಾತಕೋತ್ತರ ಪದವಿಯನ್ನು ಪಡೆಯಬಹುದು.ಆಸಕ್ತರು ಅರ್ಜಿ ಹಾಗೂ ಮಾಹಿತಿ ಪುಸ್ತಕಗಳನ್ನು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಹಂಪನಕಟ್ಟೆ, ಮಂಗಳೂರು ಇಲ್ಲಿಂದ ಪಡೆದುಕೊಳ್ಳಬಹುದೆಂದು ತುಳು ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಇವರ ಪ್ರಕಟಣೆ ತಿಳಿಸಿದೆ.

Also Read  ಸವಣೂರು: ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಜಾತ್ರೋತ್ಸವ

error: Content is protected !!
Scroll to Top