ಇಂದು ಮಳೆ ಕೊಯ್ಲು ಉಚಿತ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.19.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಉದಯವಾಣಿ ಪತ್ರಿಕೆ ಸಹಯೋಗದಲ್ಲಿ ಉಚಿತ ಮಳೆ ಕೊಯ್ಲು ಕಾರ್ಯಗಾರ ಜೂನ್19 ರಂದು ಬೆಳಗ್ಗೆ 10 ರಿಂದ 12 ಗಂಟೆವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಉದ್ಘಾಟಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ಜಲತಜ್ಞರಾದ ಶ್ರೀಪಡ್ರೆ ಅವರು ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ವೇದವ್ಯಾಸ್ ಕಾಮತ್, ದ.ಕ.ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದ.ಕ.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ , ದ.ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಆರ್.ಸೆಲ್ವಮಣಿ, ಮಂಗಳೂರು ಕ್ರೆಡೈ ಅಧ್ಯಕ್ಷ ನವೀನ್ ಕಾರ್ಡೊಜಾ ಭಾಗವಹಿಸಲಿದ್ದಾರೆ.

Also Read  ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಹೆಚ್‌ಎಂಪಿ ವೈರಸ್ ಪತ್ತೆ

error: Content is protected !!
Scroll to Top