ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ.07. ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆಯು ಕುಟುಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರದಂದು ನಡೆಯಿತು.

ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ಎ.ವಿ. ತೀರ್ಥಾರಾಮರವರು ಮಾತನಾಡಿ, ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರತಿಯೊಂದು ಗ್ರಾಮಕ್ಕೂ ವಿಸ್ತಾರಕರಾಗಿ ತೆರಳಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಹಾಗೂ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ಜನಪ್ರಿಯ ಯೋಜನೆಗಳನ್ನು ಪ್ರತೀ ಮನೆಗೂ ತಿಳಿಸುವ ಬಗ್ಗೆ ಮಾರ್ಗದರ್ಶನ ನೀಡಿದರು. ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಮಾತನಾಡಿ, ಚುನಾವಣಾ ಸಮಯದಲ್ಲಿ ಚುನಾಯಿತ ಪ್ರತಿನಿಧಿಗಳ ಪಾತ್ರದ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಕಿಶೋರ್ ಶಿರಾಡಿ, ಉಪಾಧ್ಯಕ್ಷೆ ಪುಲಸ್ತ್ಯಾ ರೈ, ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯ ಕೃಷ್ಣ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

Also Read  ಉಪ್ಪಿನಂಗಡಿ: ಮಳೆಗೆ ಕುಸಿದಿದ್ದ ಕಂಪೌಂಡ್ ದುರಸ್ಥಿಗೊಳಿಸಿದ ಎಸ್ಕೆಎಸ್ಸೆಸ್ಸೆಫ್ ಆತೂರು ಕ್ಲಸ್ಟರ್ ವಿಖಾಯ ತಂಡ

ಸಭೆಯಲ್ಲಿ ಬಿಜೆಪಿ ಬೆಂಬಲಿತ ಚುನಾಯಿತ ಪ್ರತಿನಿಧಿಗಳಾದ ಎಲ್.ಡಿ. ಬ್ಯಾಂಕ್ ಅಧ್ಯಕ್ಷರಾದ ಎ.ಬಿ. ಮನೋಹರ್ ರೈ, ವಿವಿಧ ಪಂಚಾಯತ್ ಸದಸ್ಯರು, ಪಂ.ಸಮಿತಿ ಸದಸ್ಯರು, ಸಿ.ಎ.ಬ್ಯಾಂಕ್ ಸದಸ್ಯರು, ಎ.ಪಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ವಾಡ್ಯಪ್ಪ ಗೌಡ ಎರ್ಮಾಯಿಲ್ ಸ್ವಾಗತಿಸಿ, ಪ್ರಕಾಶ್ ಎನ್.ಕೆ. ವಂದಿಸಿದರು.

error: Content is protected !!
Scroll to Top