ಕೈಕಂಬ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಮಗು ಸೇರಿದಂತೆ ಮೂವರು ಗಂಭೀರ, ಎಂಟು ಮಂದಿಗೆ ಗಾಯ



(ನ್ಯೂಸ್ ಕಡಬ) newskadaba.com ಕಡಬ, ಜೂ.19. ಕಾರುಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಎಂಟು ಮಂದಿ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬದಲ್ಲಿ ಬುಧವಾರ ಅಪರಾಹ್ನ ಸಂಭವಿಸಿದೆ.







ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕಾರು ಹಾಗೂ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕಾರುಗಳ ಮಧ್ಯೆ ಕೈಕಂಬ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಮಗು ಸೇರಿದಂತೆ ಮೂವರು ಗಂಭೀರ ಗಾಯಗಳೊಂದಿಗೆ ಒಟ್ಟು ಎಂಟು ಮಂದಿ ಗಾಯಾಳುಗಳನ್ನು ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ ಹಾಗೂ ಶಿರಾಡಿಯ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಹಾಗೂ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top