ಮಾಧ್ಯಮ ತರಬೇತಿ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಂಗಳೂರು ಕಚೇರಿಯಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದಡಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.


ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನವಿರುವ ಮತ್ತು ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಮಹಿಳಾ ಅಭ್ಯರ್ಥಿಗಳಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ನೇಮಿಸಲಾಗುವುದು. ಅಭ್ಯರ್ಥಿಗಳು ಪಡೆದಿರುವ ಅಂಕಗಳ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಆಯಾ ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು ಆಯಾ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ಸಿಗದಿದ್ದಲ್ಲಿ ಅಕ್ಕಪಕ್ಕದ ಜಿಲ್ಲೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ವಯೋಮಿತಿ 40 ವರ್ಷ ಮೀರಿರಬಾರದು.

Also Read  ಪಾಲೆಪ್ಪಾಡಿಯಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಣೆ

ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ “ಮಹಿಳಾ ಉದ್ದೇಶಿತ ಆಯವ್ಯಯದಡಿ ಮಹಿಳಾ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ” ಎಂದು ನಮೂದಿಸಿರಬೇಕು. ಆಯ್ಕೆಯಾದವರಿಗೆ ಮಾಸಿಕ 15 ಸಾವಿರ ರೂಪಾಯಿ ಗೌರವಧನ ನೀಡಲಾಗುವುದು. ಇಲಾಖೆಯ ಕ್ಷೇತ್ರಪ್ರಚಾರ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ 9 ತಿಂಗಳ ಕಾಲ ಕಾರ್ಯನಿರ್ವಹಿಸಬೇಕಾಗುತ್ತದೆ. ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಜುಲೈ 4 ಕಡೆಯ ದಿನ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, 2 ನೇ ಮಹಡಿ, ಪಿಡಬ್ಲ್ಯುಡಿ ಕಟ್ಟಡ, ನೆಹರು ಮೈದಾನ ಎದುರು, ಮಂಗಳೂರು (ದೂರವಾಣಿ 0824-2424254)ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಾರ್ತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top