ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ➤ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದಡಿಯ ನೆಹರು ಯುವ ಕೇಂದ್ರವು ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಗೆ 2019-20ನೇ ಸಾಲಿಗೆ ರಾಷ್ಟ್ರೀಯ ಯುವ ಕಾರ್ಯಕರ್ತರ ಯೋಜನೆಯಡಿ ಕಾರ್ಯಕರ್ತರನ್ನು ಪ್ರತಿ ತಾಲೂಕಿಗೆ ಇಬ್ಬರಂತೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಿದೆ.

ಎಸ್.ಎಸ್.ಎಲ್.ಸಿ/ಪಿ.ಯು.ಸಿ /ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಹತೆ ಹೊಂದಿರುವ 29 ವರ್ಷದೊಳಗಿನ ಯುವಕ-ಯುವತಿಯರು ಈ ನೇಮಕಾತಿಗೆ ಅರ್ಹರಿರಾಗಿರುತ್ತಾರೆ.ನೇರ ಸಂದರ್ಶನವು ಇದೇ ಜೂನ್ 25 ರಂದು ಪೂರ್ವಾಹ್ನ 10 ಗಂಟೆಗೆ ನೆಹರು ಯುವ ಕೇಂದ್ರ, ಕಂದಾಯ ಭವನ, ಜಿಲ್ಲಾಧಿಕಾರಿ ಕಚೇರಿ ಆವರಣ, ಮಂಗಳೂರು-1 ಇಲ್ಲಿ ನಿಗದಿಪಡಿಸಲಾಗಿದೆ.

Also Read  ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನ

ಆಸಕ್ತಿ ಹಾಗೂ ಅರ್ಹತೆ ಇರುವ ಅಭ್ಯರ್ಥಿಗಳು ವಿದ್ಯಾರ್ಹತೆ, ಆಧಾರ್ ಕಾರ್ಡ್ ಹಾಗೂ ಇತರ ದಾಖಲೆಯ ಮೂಲ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2422264 ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಯುವಜನ ಸಮನ್ವಯಾಧಿಕಾರಿ ನೆಹರು ಯುವ ಕೇಂದ್ರ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top