ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2019-20 ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಚಿಸುವವರು ನಿಗದಿತ ಅರ್ಜಿ ನಮೂನೆಗಳನ್ನು ಅಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಪಡೆಯುವುದು. ಅರ್ಜಿಗಳನ್ನು ಜುಲೈ 12 ರೊಳಗೆ ಪಡೆಯಬೇಕು. ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 22 ರೊಳಗೆ ಸಲ್ಲಿಸಬೇಕು.

ಸಾಮಾನ್ಯ ಅರ್ಹತೆಗಳು: ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಅರ್ಜಿದಾರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು ಹಾಗೂ ಒಂದೇ ಕಡೆ ಹೊಂದಿಕೊಂಡಿರುವಂತೆ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. (ಉತ್ತರಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು) ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.

Also Read  ದೀನ್ ದಯಾಳ್ ಸ್ಪರ್ಶ್ ಯೋಜನೆ

ರಾಜ್ಯ ಸರ್ಕಾರದ ಯೋಜನೆಗಳ ವಿವರ ಇಂತಿವೆ: ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ, ಅರಿವು-ಶೈಕ್ಷಣಿಕ ಯೋಜನೆ, ಗಂಗಾ ಕಲ್ಯಾಣ ವೈಯಕಿಕ ನೀರಾವರಿ ಯೋಜನೆ, ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ, ಕಮ್ಮಾರಿಕೆ, ಅಕ್ಕಸಾಲಿ ಮತ್ತು ಬಡಗಿ ಉದ್ಯಮಿಗಳಿಗೆ ತರಬೇತಿ ಮತ್ತು ಸಾಲ ಯೋಜನೆ, ರಾಜ್ಯ ಸರ್ಕಾರದ ಯೋಜನೆಗಳಿಗೆ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ರೂ 40,000 ಗಳಿಗಿಂತ ಹಾಗೂ ಪಟ್ಟಣ ಪ್ರದೇಶದವರಿಗೆ ರೂ 55,000 ಗಳಿಗಿಂತ ಕಡಿಮೆ ಇರಬೇಕು.( ಅರಿವು ಯೋಜನೆಗೆ ವಾರ್ಷಿಕ ವರಮಾನವು ರೂ 3.500 ಲಕ್ಷಗಳ ಮಿತಿ ಇರಬೇಕು). ನಿಗಮದ ಜಿಲ್ಲಾ ವ್ಯವಾಸ್ಥಾಪಕರ ಕಚೇರಿ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ವೆಬ್ ಸೈಟ್ www.karnataka.gov.in/kvcdcl ಇಲ್ಲಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

Also Read  ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ - ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

error: Content is protected !!
Scroll to Top