ಉಚಿತ ಪರೀಕ್ಷಾ ಪೂರ್ವ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಬ್ಯಾಂಕ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್-2019ರ ಮಾಹೆಯಲ್ಲಿ ನಡೆಸಲು ಉದ್ದೇಶೀಸಿರುವ ಐ.ಬಿ.ಪಿ.ಎಸ್ ಸಾಮಾನ್ಯ ಲಿಖಿತ ಪರೀಕ್ಷೆಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಹಾಗೂ ಮಂಗಳೂರು ವಿಶ್ವವಿದ್ಯಾಲಯ ಕಾಲೇಜು, ಹಂಪನಕಟ್ಟೆ, ಇವರುಗಳ ಸಂಯುಕ್ತಾಶ್ರಯದಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿಯ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯ ಕಾಲೇಜು, ಹಂಪನಕಟ್ಟೆ, ಇಲ್ಲಿ ಆಯೋಜಿಸಲಾಗಿರುತ್ತದೆ.


ತರಬೇತಿ ತರಗತಿಗಳನ್ನು ವಾರದ ದಿನಗಳಲ್ಲಿ ಅಪರಾಹ್ನ 3 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಹಾಗೂ ರಜಾ ದಿನಗಳಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು.
ಪರೀಕ್ಷಾ ಪೂರ್ವ ತರಬೇತಿ ಪಡೆಯಲಿಚ್ಛಿಸುವ, ಅಭ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ (0824-2457139) ನೋಂದಾಯಿಸಲು ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರು ಸೂಚಿಸಿರುತ್ತಾರೆ.

Also Read  ಪ್ರೇಕ್ಷಾ ಆತ್ಮಹತ್ಯೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಸೂಸೈಡ್

error: Content is protected !!
Scroll to Top