(ನ್ಯೂಸ್ ಕಡಬ) newskadaba.com ಪುತ್ತೂರು, ಜೂನ್.24.ರವಿವಾರ ಪುತ್ತೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ದಕ್ಷಿಣ ಕನ್ನಡ ಸಂಸದನಳಿನ್‌ಕುಮಾರ್‌ಕಟೀಲು ಅವರು, ಜಿಲ್ಲೆಯ ರೈಲ್ವೇ ಸಂಪರ್ಕ ಅಭಿವೃದ್ಧಿಗೆ ಒತ್ತು ನೀಡಲಾಗುವುದು.
ಮಂಗಳೂರು – ಗುರುವಾಯೂರು, ಸುಬ್ರಹ್ಮಣ್ಯ – ಕೊಲ್ಲೂರು, ಮಂಗಳೂರು – ತಿರುಪತಿ ನಡುವೆ ನೂತನ ರೈಲುಗಳ ಆರಂಭಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ರೈಲ್ವೇ ಸಚಿವರಿಗೆ ಪ್ರಸ್ತಾವನೆ ರೂಪದಲ್ಲಿ ಸಲ್ಲಿಸಲಾಗಿದೆ ಎಂದು ಹೇಳಿದರು.ಪುತ್ತೂರು ಎಪಿಎಂಸಿ ರಸ್ತೆಯಲ್ಲಿನ ರೈಲ್ವೇ ಗೇಟ್‌ಗೆ ಪರ್ಯಾಯವಾಗಿ ತಳ ಸೇತುವೆ ನಿರ್ಮಾಣವಾಗಲಿದೆ.
ವಿವೇಕಾನಂದ ಕಾಲೇಜು ರಸ್ತೆಯ ಅಗಲ ಕಿರಿದಾದ ರೈಲ್ವೇ ಮೇಲ್ಸೇತುವೆಗೆ ಪರ್ಯಾಯವಾಗಿ ನೂತನ ಸೇತುವೆ ನಿರ್ಮಿ ಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸ ಲಾಗುವುದು. ರೈಲ್ವೇ ಸಚಿವರು ರಾಜ್ಯದ ಕುರಿತ ಸಭೆ ಕರೆಯಲಿದ್ದು, ಆ ಸಂದರ್ಭ ಬೇಡಿಕೆಗಳ ಕುರಿತು ತಿಳಿಸಲಾಗುವುದು ಎಂದರು.