ನೀರಿನ ಟ್ಯಾಂಕರ್, ಬೈಕ್ ಮುಖಾಮುಖಿ ಡಿಕ್ಕಿ ➤ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂನ್.24.ಚಿಕ್ಕಮಗಳೂರಿನ ಹಳೆ ಲಕ್ಯಾ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನೀರಿನ ಟ್ಯಾಂಕರ್ ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಅಣ್ಣ, ತಂಗಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಎಸ್.ಬಿದರೆಯಿಂದ ಚಿಕ್ಕಮಗಳೂರಿಗೆ ಬೈಕ್ ನಲ್ಲಿ ಅಣ್ಣ, ತಂಗಿ ಹಾಗೂ ಮಗು ತೆರಳುತ್ತಿದ್ದ ಸಂದರ್ಭದಲ್ಲಿ ನೀರಿನ ಟ್ಯಾಂಕರ್ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಲತಾಮಣಿ (25ವರ್ಷ), ಅಶೋಕ್ (30ವರ್ಷ) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಗು ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ- ಜಿಲ್ಲಾಧಿಕಾರಿ

error: Content is protected !!
Scroll to Top