(ನ್ಯೂಸ್ ಕಡಬ) newskadaba.com ಕಡಬ, ಜೂ.24. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇಡ್ಯಡ್ಕ ಶಾಲೆಯಲ್ಲಿ ಪರಿಸರ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವು ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕೃಷಿ ಅಧಿಕಾರಿ ಉಮೇಶ ಬಿ. ಮಾತನಾಡಿ, ಪೂಜ್ಯ ಖಾವಂದರ ಆಶಯದಂತೆ ಪ್ರತಿಯೊಬ್ಬರು ತಿಂಗಳಿಗೊಂದರಂತೆ ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕುಸುಮಾಧರ ಇಡ್ಯಡ್ಕ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸವಣೂರು ವಲಯ ಮೇಲ್ವಿಚಾರಕರಾದ ಅಶ್ವಿನಿ ಜೆ, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಇಡ್ಯಡ್ಕ, ಕಾಣಿಯೂರು ಕ್ಲಸ್ಟರ್ ಸಿ.ಆರ್.ಪಿ. ಯಶೋದಾ ಎ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಾರ್ವಾಕ ಒಕ್ಕೂಟದ ಅಧ್ಯಕ್ಷ ಆನಂದ ಪೂಜಾರಿ ಗಾಳಿಬೆಟ್ಟು, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಚಾರ್ವಾಕ ಸಮಿತಿ ಅಧ್ಯಕ್ಷ ದಿನೇಶ್ ಐ.ಕೆ., ಸೇವಾ ಪ್ರತಿನಿಧಿ ಕುಸುಮಾಧರ ಮರ್ಲಾಣಿ ಉಪಸ್ಥಿತರಿದ್ದರು.
ಶಾಲಾ ಮಕ್ಕಳು ಪ್ರಾರ್ಥಿಸಿದರು. ಸಹಶಿಕ್ಷಕಿ ಚಂದ್ರಿಕಾ ಸ್ವಾಗತಿಸಿ, ಅಕ್ಷತಾ ವಂದಿಸಿದರು. ಶಾಲಾ ಮುಖ್ಯ ಗುರು ಜಯಂತ ವೈ. ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಗಿಡಗಳನ್ನು ವಿತರಣೆ ಮಾಡಲಾಯಿತು.