ಕೆಂಪೇಗೌಡ ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಜೂನ್ 27 ರಂದು ರವೀಂದ್ರ ಸಭಾಭವನ, ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿ ನಡೆಯಲಿದೆ.


ಪೂರ್ವಾಹ್ನ 10.30 ಗಂಟೆಗೆ ಕಾರ್ಯಕ್ರಮವು ನಡೆಯಲಿದ್ದು ನಗರಾಭಿವೃದ್ಧಿ ಸಚಿವ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಮಂಗಳೂರು ದಕ್ಷಿಣ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿರುವರು.

Scroll to Top