ಪಶುಪಾಲಕರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ದ.ಕ. ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ವತಿಯಿಂದ 2019-20ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ (ಘಟಕ ವೆಚ್ಚ ರೂ.19,800) ರೂ. 8,000 ಸಹಾಯಧನ ಮೂಲಕ 2 ಮೇವು ಕತ್ತರಿಸುವ ಯಂತ್ರಗಳ ಸರಬರಾಜು ಯೋಜನೆಗೆ ಅರ್ಹ ಪಶುಪಾಲಕರಿಂದ ಅರ್ಜಿ ಅಹ್ವಾನಿಸಲಾಗಿದೆ.

ಪಶುಪಾಲಕರು ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಶುವೈದ್ಯಾಧಿಕಾರಿ/ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಅರ್ಜಿಯನ್ನು ಅವಶ್ಯಕ ದಾಖಲೆಗಳೊಂದಿಗೆ ಜೂನ್ 30 ರೊಳಗೆ ಸಲ್ಲಿಸಲು ಉಪನಿರ್ದೇಶಕರು(ಆಡಳಿತ) ಪಶುಪಾಲನಾ ಇಲಾಖೆ, ಇವರ ಪ್ರಕಟಣೆ ತಿಳಿಸಿದೆ.

Also Read  ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

error: Content is protected !!
Scroll to Top