ಅತ್ಯತ್ತಮ ಕೃತಿಗಳಿಗೆ ಬಹುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿವರ್ಷದಂತೆ 2018ನೆಯ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು.

ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2018ರ ಜನವರಿ 1 ರಿಂದ 2018ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2018 ಎಂದು ಮುದ್ರಿತವಾಗಿರಬೇಕು. ಆಯ್ಕೆ ಮಾಡುವ ಪುಸ್ತಕಗಳ ಪ್ರಕಾರ ಇಂತಿವೆ: ಕಾವ್ಯ (ಚವನಗಳು ಮತ್ತು ಹನಿಗವನಗಳು ಸೇರಿ), ನವಕವಿಗಳ ಪ್ರಥಮ ಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತಪ್ರತಿ-30 ವರ್ಷ ಒಳಗಿರುವ ಯುವ ಕವಿಗಳು ತಮ್ಮ ಅಪ್ರಕಟಿತ ಪ್ರಥಮ ಕವನ ಸಂಕಲನದ ಹಸ್ತಪ್ರತಿಯನ್ನು ಕಳುಹಿಸಿಕೊಡಬೇಕು.

ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ), ಪ್ರವಾಸ ಸಾಹಿತ್ಯ, ಜೀವನಚರಿತ್ರೆ/ಆತ್ಮಕಥೆ, ಸಾಹಿತ್ಯ ವಿಮರ್ಶೆ(ಸಾಹಿತ್ಯಚರಿತ್ರೆ, ಆಹಿತ್ಯ ತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ), ಗ್ರಂಥ ಸಂಪಾದನೆ(ಪ್ರಾಚೀನ ಕೃತಿಗಳ ಸಂಪಾದನೆ),ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿಂಗ್,ವೈದ್ಯ, ಭೂ, ಖಗೋಳ, ಗೃಹ ವಿಜ್ಞಾನ, ಪರಿಸರ, ಮಾನವಿಕ (ಜಾನಪದ, ಇತಿಹಾಸ, ರಾಜಕೀಯ ಶಾಸ್ತ್ರ, ಸಮಾಜಶಾಸ್ತ್ರ, ಮನಃಶಾಸ್ತ್ರ, ಭಾಷಾಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭಂಡಾರ ವಿಜ್ಞಾನ, ಸಮೂಹಸಂವಹನ, ಧಾರ್ಮಿಕ, ದಾರ್ಶನಿಕ), ಸಂಶೋಧನೆ(ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿಗಳಿಗೆ ಸಂಬಂಧಿಸಿದ ಸಂಶೋಧನೆ), ವೈಚಾರಿಕ/ಅಂಕಣ ಬರಹ,

Also Read  ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ

ಅನುದಾನ-ಸೃಜನ-(ಸೃಜನ-(ಕಾದಂಬರಿ, ಕಾವ್ಯ, ಸಣ್ಣಕತೆ, ನಾಟಕ,ಲಲಿತಪ್ರಬಂಧ, ಪ್ರವಾಸ ಸಾಹಿತ್ಯ, ಜೀವನಚರಿತ್ರೆ) ಸೃಜನೇತರ-(ಶಾಸ್ತ್ರಸಾಹಿತ್ಯ, ಸಾಹಿತ್ಯ ವಿಮರ್ಶೆ), ಅನುವಾದ-2-(ಸೃಜನ/ಸೃಜನೇತರ)ಕನ್ನಡದಿಂದ ಅನ್ಯಭಾಷೆಗೆ ಅನುವಾದಗೊಂಡ ಕೃತಿ,ಲೇಖಕರ ಮೊದಲ ಸ್ವತಂತ್ರ ಕೃತಿಗೆ ಬಹುಮಾನ: 2018ರಲ್ಲಿ ಪ್ರಕಟವಾದ ಹೊಸ ಬರಹಗಾರರ ಮೊದಲ ಸ್ವತಂತ್ರ ಕೃತಿಯೆಂದು ಖಾತರಿಪಡಿಸುವ ದೃಢೀಕರಣ ಪತ್ರ ಲಗತ್ತಿಸಬೇಕು, ಕನ್ನಡದಿಂದ ಇಂಗ್ಲಿಷಿಗೆ ಅನುವಾದ.ಬಹುಮಾನಕ್ಕಾಗಿ ಪರಿಗಣಿಸಲ್ಪಡದ ಕೃತಿಗಳು ಮರುಮುದ್ರಣವಾದ ಪುಸ್ತಕಗಳಾಗಿರಬಾರದು, ಪಿಎಚ್.ಡಿ. ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳಾಗಿರಬಾರದು ಪಠ್ಯಪುಸ್ತಕಗಳಾಗಿರಬಾರದು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳಾಗಿರಬಾರದು,

Also Read  ಚಾಲಕನ ನಿಯಂತ್ರಣ ತಪ್ಪಿದ ಸೈಕಲ್‌‌ಗೆ ಢಿಕ್ಕಿ ಹೊಡೆದ ಕಾರು..! ➤ ಸೈಕಲ್ ಸವಾರ ಸ್ಥಳದಲ್ಲೇ ಮೃತ್ಯು

ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳಾಗಿರಬಾರದು, ಒಂದೇ ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಮತ್ತದೇ ಪ್ರಕಾರದಲ್ಲಿ ಪರಿಗಣಿಸುವುದಿಲ, ಒಬ್ಬ ಲೇಖಕರಿಗೆ ಮೂರು ಭಾರಿ ಬೇರೆ ಬೇರೆ ಪ್ರಕಾರಗಲ್ಲಿ ಮಹುಮಾನ ಪಡೆಯುವ ಅವಕಾಶವಿದೆ.ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2 ನೇ ಮಹಡಿ ,ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ರಿಜಿಸ್ಟರ್ಡ್ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ 2019ರ ಜುಲೈ 10 ರೊಳಗೆ ತಲುಸಿಸಬೇಕು. ಕಳುಹಿಸಲ್ಪಡುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

error: Content is protected !!
Scroll to Top