(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ , ಜೂನ್.26. 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಚರಂಡಿ ಕಾಮಗಾರಿ ಹಾಗೂ ದಾರಿ ದೀಪ ಅಳವಡಿಕೆ ಕಾಮಗಾರಿಯನ್ನು ನಡೆಸುವಂತೆ ಒತ್ತಾಯಿಸಿ ನಮ್ಮೂರು- ನೆಕ್ಕಿಲಾಡಿ ಸಂಘಟನೆಯ ನೇತೃತ್ವದಲ್ಲಿ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಜೂ.27ರಂದು ಪ್ರತಿಭಟನೆ ನಡೆಯಲಿದೆ.
ಗ್ರಾ.ಪಂ.ನ ಜಡತ್ವ ಧೋರಣೆಯನ್ನು ಖಂಡಿಸಿ 34ನೇ ನೆಕ್ಕಿಲಾಡಿ ಗ್ರಾ.ಪಂ. ವಠಾರದಲ್ಲಿ ಪೂರ್ವಾಹ್ನ 11 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಮಳೆಗಾಲ ಆರಂಭವಾದರೂ 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಚರಂಡಿ ವ್ಯವಸ್ಥೆ ಅಸ್ಥವ್ಯಸ್ಥವಾಗಿದೆ. ಹಲವು ಕಡೆ ಚರಂಡಿಗಳೇ ಇಲ್ಲ. ಇದ್ದ ಚರಂಡಿಗಳೂ ಹೂಳು ತುಂಬಿ ಮುಚ್ಚಿ ಹೋಗಿದ್ದು, ಅದರ ಮೇಲೆ ಗಿಡ-ಗಂಟಿಗಳು ಆವರಿಸಿವೆ. ಇದರಿಂದ ಮಳೆ ನೀರು ರಸ್ತೆ ಸೇರಿದಂತೆ ಎಲ್ಲೆಂದರಲ್ಲಿ ಹರಿದು ಸಮಸ್ಯೆಗೆ ಕಾರಣವಾಗಿದೆ. ಅಲ್ಲದೇ, ಗ್ರಾ.ಪಂ. ವ್ಯಾಪ್ತಿಯಲ್ಲಿ ಶೇ.90 ದಾರಿ ದೀಪಗಳು ಉರಿಯುತ್ತಿಲ್ಲ. ಆದ್ದರಿಂದ ಈ ಎರಡು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ನಮ್ಮೂರು- ನೆಕ್ಕಿಲಾಡಿ ಅಧ್ಯಕ್ಷ ಅಬ್ದುರ್ರಹ್ಮಾನ್ ಯುನಿಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.