(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಅನೇಕ ಕಡೆಗಳಲ್ಲಿ ಡೆಂಗ್ಯೂ ಪೀಡಿತರ ಸಂಖ್ಯೆ ಹೆಚ್ಚಾಗಿದ್ದು ಮುಂಜಾಗೃತ ಕ್ರಮವಾಗಿ ಆರೋಗ್ಯ ತಪಾಸಣೆ ಸಹಿತ ಅಗತ್ಯ ಕ್ರಮಗಳಿಗಾಗಿ ಆರೋಗ್ಯ ಇಲಾಖೆಯು ಅರೆಕೆರೆ ಬೈಲು ಮತ್ತು ಗೋರಕ್ಷದಂಡು ಪರಿಸರದಲ್ಲಿ ಆರೋಗ್ಯ ಶಿಬಿರವನ್ನು ಮುಂದುವರಿಸಿದೆ.
100ಕ್ಕೂ ಹೆಚ್ಚು ಕಾರ್ಯಕರ್ತರು ಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ.ಸೋಮವಾರದಿಂದಲೇ ಶಿಬಿರ ನಡೆಯುತ್ತಿದ್ದು, ಬುಧವಾರ ತನಕ ಮುಂದುವರಿಯಲಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ (ಪ್ರಭಾರ) ಡಾ| ನವೀನ್‌ಚಂದ್ರ ತಿಳಿಸಿದ್ದಾರೆ. 40ಕ್ಕೂ ಹೆಚ್ಚು ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 6 ಮಂದಿಯಲ್ಲಿ ಡೆಂಗ್ಯೂ ದೃಢಪಟ್ಟಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್ ತಿಳಿಸಿದ್ದಾರೆ.