ಕಾವ್ಯಾ ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹ ► ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.09. ಮೂಡಬಿದಿರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ಕಾವ್ಯಾ ಪೂಜಾರಿಯ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ 30ಕ್ಕೂ ಅಧಿಕ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ‘ಜಸ್ಟೀಸ್ ಫಾರ್ ಕಾವ್ಯಾ’ ಹೋರಾಟ ಸಮಿತಿ ದ.ಕ. ಜಿಲ್ಲೆಯ ವತಿಯಿಂದ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರದಂದು ಬೃಹತ್ ಪ್ರತಿಭಟನೆ ನಡೆಯಿತು.

ಜ್ಯೋತಿ ವೃತ್ತದಿಂದ ಡಿಸಿ ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಹಲವು ಕಾಲೇಜುಗಳ ವಿದ್ಯಾರ್ಥಿಗಳು, ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಕಾವ್ಯಾ ಸಾವಿನ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಹಾಗೂ ವಿದ್ಯಾರ್ಥಿನಿಯ ಪೋಷಕರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಧರಣಿ ನಿರತರು ಆಗ್ರಹಿಸಿದರು. ಧರಣಿಯಲ್ಲಿ ದಿನಕರ್ ಶೆಟ್ಟಿ, ಮೇಯರ್ ಕವಿತಾ ಸನಿಲ್, ಮಾಜಿ ಮೇಯರ್ ಅಶ್ರಫ್, ಅಶೋಕ್ ಕೊಂಚಾಡಿ, ರಘುವೀರ್ ಸೂಟರ್ ಪೇಟೆ, ವಿಷ್ಣುಮೂರ್ತಿ, ಯಶವಂತ ಮರೋಳಿ, ಕಾವ್ಯಾಳ ತಂದೆ ಲೋಕೇಶ್ ಪೂಜಾರಿ, ತಾಯಿ ಬೇಬಿ ಮೊದಲಾದವರು ಪಾಲ್ಗೊಂಡಿದ್ದರು.

error: Content is protected !!
Scroll to Top