ಬಂಟ್ವಾಳ: ತನ್ನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ತಂದೆ ➤ ಬಾಲಕಿ ಗರ್ಭಿಣಿಯಾಗಿದ್ದರಿಂದ ತಡವಾಗಿ ಬೆಳಕಿಗೆ ಬಂದ ಪ್ರಕರಣ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.28. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಸ್ವತಃ ತಂದೆಯೇ ಅತ್ಯಾಚಾರ ಎಸಗಿದ್ದರಿಂದ ಬಾಲಕಿ ಗರ್ಭಿಣಿಯಾದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ಬಾಲಕಿಯು ತಂದೆ, ತಾಯಿ, ತಮ್ಮ ಹಾಗೂ ತಂಗಿಯೊಂದಿಗೆ ಫೆಬ್ರವರಿ 8 ರಂದು ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿರುವ ಸಂದರ್ಭ ತನ್ನ ತಂದೆ ಬಲಾತ್ಕಾರವಾಗಿ ಅತ್ಯಾಚಾರ ಎಸಗಿದ್ದಾನೆ. ಅದಲ್ಲದೆ ಬಳಿಕವೂ ಹಲವು ಸಲ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಆರೋಪಿಯನ್ನು ಬಂಧಿಸಿರುವ ಪುಂಜಾಲಕಟ್ಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಮಂಗಳೂರು: ಅಕ್ರಮ ಕಳ್ಳಭಟ್ಟಿಗೆ ಕಡಿವಾಣ ➤ ಡಾ.ರಾಜೇಂದ್ರ ಕೆವಿ

error: Content is protected !!
Scroll to Top