ಕಳಾರ: ಬೈಕ್ – ಆ್ಯಕ್ಟಿವಾ ಢಿಕ್ಕಿ ► ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ.09. ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ಎಂಬಲ್ಲಿ ಬೈಕ್ ಹಾಗೂ ಹೋಂಡಾ ಆ್ಯಕ್ಟಿವಾ ಮಧ್ಯೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಾಯಗೊಂಡ ಘಟನೆ ಬುಧವಾರ ಅಪರಾಹ್ನ ನಡೆದಿದೆ.

ಘಟನೆಯಲ್ಲಿ ಹೋಂಡಾ ಆ್ಯಕ್ಟಿವಾ ಸವಾರ ಕಡಬ ಕುಟ್ರುಪ್ಪಾಡಿ ನಿವಾಸಿ ಪದ್ಮಯ್ಯ ಗೌಡ(48) ಹಾಗೂ ಬೈಕ್ ಸವಾರ ಕಾಣಿಯೂರು ಸಮೀಪದ ಬರೆಪ್ಪಾಡಿ ಕಾೖಮಣ ನಿವಾಸಿ ಪದ್ಮಯ್ಯ(55) ರವರು ಗಾಯಗೊಂಡಿದ್ದು, ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Scroll to Top