(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.29.ದಕ್ಷಿಣ ಕನ್ನಡ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಪಂಚಾಯತ್ ವಲಯದ ಕ್ರಿಯಾ ಯೋಜನೆಯಡಿ 50ವರ್ಷ ಮೇಲ್ಪಟ ಹಾಗೂ ಆರ್ಥಿಕವಾಗಿ ಕಷ್ಟ ಪರಿಸ್ಥಿತಿಯಲ್ಲಿರುವ ಅಂದರೆ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ. 20,000/- ಮಿತಿಯೊಳಗಿರುವ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ಕುಸ್ತಿ ಹಾಗೂ ಇತರ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕ್ರೀಡಾಪಟುಗಳು ಸುಮಾರು 30-40 ವರ್ಷಗಳ ಹಿಂದೆ (ಯುವ ವಯಸ್ಸಿನಲ್ಲಿ) ಕುಸ್ತಿ ಪಂದ್ಯದಲ್ಲಿ ಭಾಗವಹಿಸಿದ ಮಾಜಿ ಪೈಲ್ವಾನರು ಹಾಗೂ ಇತರ ಕ್ರೀಡಾಪಟುಗಳ ಸಾಧನೆಯ ಬಗ್ಗೆ ಪೋಸ್ಟರ್, ಬ್ಯಾನರ್ ಹ್ಯಾಂಡ್ ಬಿಲ್ಸ್, ಆಮಂತ್ರಣ ಪತ್ರಿಕೆಗಳು ಹಾಗೂ ಪದಕಗಳ ಆಧಾರವನ್ನು ಪರಿಗಣಿಸಿ, ಆಯ್ಕೆ ಪ್ರಕ್ರಿಯೆಯನ್ನು ಮಾಡಬೇಕಾಗಿರುತ್ತದೆ. ಆದ್ದರಿಂದ 30-40 ವರ್ಷಗಳ ಹಿಂದೆ (ಯುವ ವಯಸ್ಸಿನಲ್ಲಿ) ಕುಸ್ತಿ ಹಾಗೂ ಇತರ ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಕುಸ್ತಿ ಹಾಗೂ ಇತರ ಕ್ರೀಡಾಪಟುಗಳಿಗೆ ಮಾಸಾಶನ ಮಂಜೂರು ಮಾಡಲು ಆಯ್ಕೆ ಪ್ರಕ್ರಿಯೆಯನ್ನು ನಡೆಸುವ ಸಂಬಂಧ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ದ.ಕ. ಜಿಲ್ಲಾ ಪಂಚಾಯತ್, ಕೊಟ್ಟಾರ, ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಅಯೋಜಿಸಲಾಗಿದೆ.
ಜುಲೈ 10 ರಂದು ಬೆಳಿಗ್ಗೆ 11 ಗಂಟೆಗೆ ದ.ಕ. ಜಿಲ್ಲಾ ಪಂಚಾಯತ್‍ನ ಮಿನಿ ಸಭಾಂಗಣದಲ್ಲಿ ಸಭೆಯನ್ನು ಕರೆಯಲಾಗಿದೆ. ಆದ್ದರಿಂದ ವಿವಿಧ ಕ್ರೀಡಾ ಸಂಸ್ಥೆಯ ಮುಖ್ಯಸ್ಥರು ಹಾಗೂ ಅರ್ಜಿ ಸಲ್ಲಿಸಲಿಚ್ಚಿಸುವ 50 ವರ್ಷ ಮೇಲ್ಪಟ್ಟ ಕುಸ್ತಿ ಹಾಗೂ ಇತರ ಕ್ರೀಡಾಪಟುಗಳು ತಮ್ಮ ಆಧಾರ್ ಕಾರ್ಡ್/ ಪಾನ್‍ಕಾರ್ಡ್, ಆದಾಯ ಪ್ರಮಾಣ ಪತ್ರ, ವಯಸ್ಸಿನ ಪ್ರಮಾಣ ಪತ್ರ, ರಾಜ್ಯ/ ರಾಷ್ಟ್ರ/ಅಂತರಾಷ್ಟ್ರ ಮಟ್ಟದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಬಗ್ಗೆ ದೃಢೀಕೃತ ಪ್ರಮಾಣ ಪತ್ರಗಳ ಎಲ್ಲಾ ದಾಖಲೆಗಳೊಂದಿಗೆ ಜುಲೈ 10 ರಂದು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮಿನಿ ಸಭಾಂಗಣದಲ್ಲಿ ಹಾಜರಾಗುವಂತೆ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ. ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.