ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ಹಾಗೂ ➤ ಅಕ್ರಮ ಕಳ್ಳಸಾಗಾಣಿಕೆ ತಡೆಗಟ್ಟುವ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.29.ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ಹಾಗೂ ಅಕ್ರಮ ಕಳ್ಳಸಾಗಾಣಿಕೆ ತಡೆಗಟ್ಟುವ ದಿನ -2019 ಕಾರ್ಯಕ್ರಮ ಜುಲೈ 2 ರಂದು ಬೆಳಿಗ್ಗೆ 9.30 ಗಂಟೆಗೆ ರೊಜಾರಿಯೋ ಕಲ್ಚರಲ್ ಹಾಲ್, ಮಂಗಳೂರು ಇಲ್ಲಿ ನಡೆಯಲಿದೆ.

ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ಆರೋಗ್ಯ ವಿಭಾಗ) ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ, ರೊಜಾರಿಯೊ ಪದವಿ ಪೂರ್ವಕಾಲೇಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮತ್ತು ಸಿಐಎಸ್‍ಎಫ್ (ಎಂ.ಆರ್.ಪಿ.ಎಲ್ ಯುನಿಟ್), ಮಂಗಳೂರು ಇವರುಗಳ ಸಹಯೋಗದೊಂದಿಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಅವರು ವಹಿಸಲಿದ್ದಾರೆ. ಉದ್ಘಾಟನೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಅಧ್ಯಕ್ಷರು ಕಾನೂನು ಸೇವೆಗಳ ಪ್ರಾಧಿಕಾರ ಕಡ್ಲೂರು ಸತ್ಯನಾರಾಯಣಾಚಾರ್ಯ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Also Read  ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆ ಅಂಗೀಕರಿಸಿದ ಅಸ್ಸಾಂ ವಿಧಾನಸಭೆ

 

error: Content is protected !!
Scroll to Top