ಬಹುಗ್ರಾಮ ಕುಡಿಯುವ ನೀರಿನಯಾನೆ ಮನವಿಗೆ ಸರಕಾರದ ಸ್ಪಂದನೆ ➤ ಸೂಕ್ತ ಕ್ರಮಕ್ಕೆ ಗ್ರಾಮೀಣಾಬಿವೃದ್ಧಿ ಪಂಚಾಯತ್ ರಾಜ್ ಇಲಾಖೆಗೆ ಪತ್ರ

(ನ್ಯೂಸ್ ಕಡಬ) newskadaba.com ಕಡಬ, ಜೂನ್.29.ಕಡಬ ತಾಲೂಕಿನ ಕಡಬ, ಕೋಡಿಂಬಾಳ, ಕುಟ್ರುಪ್ಪಾಡಿ, 102 ನೆಕ್ಕಿಲಾಡಿ, ಬಂಟ್ರ ಗ್ರಾಮಗಳಿಗೆ ಕಡಬ ಗ್ರಾಮದ ಪಾಲೋಳಿ ಎಂಬಲ್ಲಿಂದ ಕುಮಾರಧಾರ ನದಿಯಿಂದ ನೀರು ಒದಗಿಸುವ ಸಂಬಂಧ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಅನುದಾನ ಮಂಜೂರುಗೊಳಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಪತ್ರ ಬರೆಯಲಾಗಿತ್ತು.

 

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಅನುದಾನ ಮಂಜೂರುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸಲ್ಲಿಸಿರುವ ಮನವಿಯ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಪತ್ರ ಬರೆದಿರುವುದಾಗಿ ಮುಖ್ಯಮಂತ್ರಿಯವರ ಉಪ ಕಾರ್ಯದರ್ಶಿಯವರಿಂದ ಮಾಹಿತಿ ಬಂದಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿಯೂ ಆಗಿರುವ ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್‍ರವರು ತಿಳಿಸಿದ್ದಾರೆ.

Also Read  ಹೊಸ್ಮಠ ಸೇತುವೆ ಮುಳುಗಡೆ ► ಉಪ್ಪಿನಂಗಡಿ - ಸುಬ್ರಹ್ಮಣ್ಯ ಸಂಚಾರ ಅಸ್ತವ್ಯಸ್ತ

ಇದಕ್ಕೆ ಸ್ಪಂಧಿಸಿರುವ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಜೂ.4ರಂದು (ಸಿ.ಎಂ/26390/ಆರ್‍ಇಪಿ.ಜಿಇಎನ್/2019ದಿನಾಮಕ 4.6.2019) ಪತ್ರ ಬರೆದಿರುವುದಾಗಿ ಮುಖ್ಯಮಂತ್ರಿಯವರ ಉಪಕಾರ್ಯದರ್ಶಿ ಅರುಣ್ ಪುರ್ಟಾಡೋರವರು ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ ಎಂದು ಸಯ್ಯದ್ ಮೀರಾ ಸಾಹೇಬ್‍ರವರು ತಿಳಿಸಿದ್ದಾರೆ.

error: Content is protected !!
Scroll to Top